Recent Posts

Monday, January 20, 2025
ಸುದ್ದಿ

ರಾಜ್ಯದಲ್ಲಿ ಅಕ್ರಮವಾಗಿ ಸ್ಥಾಪಿಸಿರುವ ‘ಮೊಬೈಲ್ ಟವರ್’ ಸಂಸ್ಥೆಗಳಿಗೆ ದಂಡ-ಕಹಳೆ ನ್ಯೂಸ್

ರಾಜ್ಯಾದ್ಯಂತ ಅಕ್ರಮವಾಗಿ ಮೊಬೈಲ್ ಟವರ್ ಗಳನ್ನು ಸ್ಥಾಪಿಸಿರುವ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಅಕ್ರಮವಾಗಿ ಮೊಬೈಲ್ ಟವರ್ ಗಳನ್ನು ಸ್ಥಾಪಿಸಿರುವ ಸಂಸ್ಥೆಗಳಿಗೆ ದಂಡ ವಿಧಿಸಿ ಎಂದು ಸೂಚನೆ ನೀಡಿದ್ದಾರೆ.

ಕರ್ನಾಟಕ ಇನ್‌ ಸ್ಟಾಲೇಶನ್ ಆಫ್ ನ್ಯೂ ಟೆಲಿಕಮ್ಯುನಿಕೇಶನ್ ಇನ್ಸಾಸ್ಟ್ರಕ್ಚರ್ ಟವರ್ಸ್ ನಿಯಮಾವಳಿ 2019 ರ ಪ್ರಕಾರ, ಬಿಬಿಎಂಪಿ ವ್ಯಾಪ್ತಿಯಲ್ಲಿ 1 ಲಕ್ಷ ರೂ.ವರೆಗೆ, ಇತರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 50,000 ರೂ, ನಗರ ಪುರಸಭೆ ವ್ಯಾಪ್ತಿಯಲ್ಲಿ ಮತ್ತು ಗ್ರಾಮ ಪಂಚಾಯ್ತಿ ಮಿತಿಗಳಲ್ಲಿ 35,000 ರೂ. ಇನ್‌ಸ್ಟಾಲೇಶನ್ ಚಾರ್ಜಸ್ ವಿಧಿಸಬಹುದಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿಯೇ ಸುಮಾರು 8,000 ಇಂತಹ ಟವರ್‌ಗಳು ಇದ್ದು ಮತ್ತು ರಾಜ್ಯದಾದ್ಯಂತ 48,000 ಇವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹಾಗಾಗಿ ಅಕ್ರಮವಾಗಿ ಟವರ್‌ಗಳನ್ನು ಅಳವಡಿಸಿರುವ ಟೆಲಿಕಾಂ ಸೇವಾ ಪೂರೈಕೆದಾರರಿಗೆ ರಾಜ್ಯ ಸರ್ಕಾರ ದಂಡ ವಿಧಿಸಬೇಕು ಎಂದು ಕಾಂಗ್ರೆಸ್ ಮಾಜಿ ಶಾಸಕ ರಮೇಶ್ ಬಾಬು ಮನವಿ ಸಲ್ಲಿಸಿದ್ದರು. ಅದನ್ನು ಪರಿಗಣಿಸಿ ಸಿದ್ದರಾಮಯ್ಯ ಈ ನಿರ್ದೇಶನ ನೀಡಿದ್ದಾರೆ. ಈ ಮೂಲಕ ರಾಜ್ಯವು 7,000 ಕೋಟಿ ರೂಪಾಯಿಗಳನ್ನು ಸಂಗ್ರಹಿಸಬಹುದು ಎಂದು ಅವರು ಹೇಳಿದ್ದಾರೆ.ರಾಜ್ಯದಲ್ಲಿರುವ ಟವರ್‌ಗಳ ಪೈಕಿ ಹಲವನ್ನು ಇನ್‌ಸ್ಟಾಲೇಶನ್‌ ಚಾರ್ಜಸ್ ಪಾವತಿಸದೆ ಸ್ಥಾಪಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇದರಿಂದ ರಾಜ್ಯದ ಬೊಕ್ಕಸಕ್ಕೆ ದೊಡ್ಡ ನಷ್ಟವಾಗಿದೆ ಎಂದು ಸಿಎಂಗೆ ಸಲ್ಲಿಸಿದ್ದ ಮನವಿ ಪತ್ರದಲ್ಲಿ ರಮೇಶ್ ಉಲ್ಲೇಖಿಸಿದ್ದರು. ಅಳವಡಿಕೆ ಶುಲ್ಕವನ್ನು ಇತರೆ ತೆರಿಗೆಯೊಂದಿಗೆ ವಸೂಲಿ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು. ಇತರ ರಾಜ್ಯಗಳು ಮೊಬೈಲ್ ಟವರ್‌ಗಳಿಂದ 2 ಲಕ್ಷ ರೂ.ವರೆಗೆ ಶುಲ್ಕವನ್ನು ಸಂಗ್ರಹಿಸುತ್ತವೆ. ಕರ್ನಾಟಕ ಕೂಡ ಶುಲ್ಕ ಹೆಚ್ಚಿಸಬೇಕು ಎಂದು ಅವರು ಸಲಹೆ ನೀಡಿದ್ದರು