Sunday, January 19, 2025
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ನಾಯಿ ಕಚ್ಚಿದ ಕೇಸ್‌ – ನಟ ದರ್ಶನ್‌ಗೆ ಕ್ಲೀನ್‌ ಚಿಟ್‌, ಶೀಘ್ರವೇ ಚಾರ್ಜ್‌ಶೀಟ್‌ – ಕಹಳೆ ನ್ಯೂಸ್

ಬೆಂಗಳೂರು: ಮಹಿಳೆಗೆ ನಟ ದರ್ಶನ್ ನಾಯಿ ಕಚ್ಚಿದ ಪ್ರಕರಣದಲ್ಲಿ (Dog Bite Case) ಸ್ಯಾಂಡಲ್‌ವುಡ್ ಸಾರಥಿಗೆ ಬಿಗ್ ರಿಲೀಫ್‌ ಸಿಗುವ ಸಾಧ್ಯತೆ ದಟ್ಟವಾಗಿದೆ.

ಹೌದು. ಆರ್.ಆರ್ ನಗರ ಪೊಲೀಸರು ನಟ ದರ್ಶನ್‌ಗೆ (Actor Darshan) ಕ್ಲೀನ್ ಚಿಟ್ ಕೊಡಲು ಮುಂದಾಗಿದ್ದಾರೆ ಎನ್ನುತ್ತಿದೆ ಪೊಲೀಸ್ ಮೂಲಗಳು. ದರ್ಶನ್ ಮನೆಯ ನಾಯಿ ಕಳೆದ ಅಮಿತಾ ಜಿಂದಾಲ್ ಅವರಿಗೆ ಕಚ್ಚಿತ್ತು. ಈ ಸಂಬಂಧ ಮಹಿಳೆ ನಟ ದರ್ಶನ್ ಹಾಗೂ ಮನೆ ಕೆಲಸದವನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಕರಣದಲ್ಲಿ ಆರೋಪಿಗಳಾಗಿದ್ದ ದರ್ಶನ್ ಹಾಗೂ ಮನೆ ಕೆಲಸದವನಿಗೆ ನೋಟಿಸ್ ಕೊಟ್ಟು ವಿಚಾರಣೆ ಮಾಡಿ ಘಟನೆ ಬಗ್ಗೆ ಇಬ್ಬರ ಬಳಿ ಆರ್.ಆರ್ ನಗರ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದರು. ಈಗ ಚಾರ್ಜ್ ಶೀಟ್ (Chargesheet) ಸಲ್ಲಿಸಲು ಆರ್.ಆರ್ ನಗರ ಪೊಲೀಸರು ತಯಾರಿ ಮಾಡುತ್ತಿದ್ದಾರೆ. ಪ್ರಕರಣದಲ್ಲಿ ದರ್ಶನ್ ಪಾತ್ರ ಅಷ್ಟಾಗಿ ಕಂಡು ಬರದ ಹಿನ್ನೆಲೆಯಲ್ಲಿ ದರ್ಶನ್‌ ಹೆಸರು ಕೈಬಿಟ್ಟು ಚಾರ್ಜ್‌ಶೀಟ್‌ ಸಲ್ಲಿಸಲು ಪೊಲೀಸರು ಮುಂದಾಗಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕ್ಲೀನ್ ಚಿಟ್ ಯಾಕೆ?
ಘಟನೆ ನಡೆದಾಗ ನಟ ದರ್ಶನ್ ಘಟನಾ ಸ್ಥಳದಲ್ಲಿ ಇರಲಿಲ್ಲ. ನಾಯಿ ದಾಳಿಯ ದಿನ ದರ್ಶನ್ ಹೊರ ರಾಜ್ಯದಲ್ಲಿ ಶೂಟಿಂಗ್‌ನಲ್ಲಿ (Shooting) ಭಾಗಿಯಾಗಿದ್ದರು. ದರ್ಶನ್‌ ಹೊರಗಡೆ ಇರುವುದನ್ನು ಟವರ್ ಲೋಕೇಷನ್ ಮೂಲಕ ಪೊಲೀಸರು ಖಾತ್ರಿ ಪಡಿಸಿಕೊಂಡಿದ್ದಾರೆ.

ದರ್ಶನ್ ನಾಯಿ ನೋಡಿಕೊಳ್ಳಲು ಕೆಲಸದವರನ್ನು ನೇಮಕ ಮಾಡಿದ್ದರು. ಮಹಿಳೆ ದರ್ಶನ್ ವಿರುದ್ಧ ಮಾಡಿರುವ ಆರೋಪಗಳಿಗೆ ಸೂಕ್ತ ಸಾಕ್ಷ್ಯಗಳಿಲ್ಲ. ಕೆಲಸದ ವ್ಯಕ್ತಿ ಮಾಡಿರುವ ತಪ್ಪಿಗೆ  ಮಾಲೀಕನನ್ನು ಆರೋಪಿ ಮಾಡುವುದು ಸರಿಯಲ್ಲ ಎಂಬ ಕಾರಣಕ್ಕೆ ದರ್ಶನ್‌ ಹೆಸರು ಕೈಬಿಟ್ಟು ಚಾರ್ಜ್‌ಶೀಟ್‌ ಸಲ್ಲಿಸಲು ಪೊಲೀಸರು ಮುಂದಾಗಿದ್ದಾರೆ.