ಸುಬ್ರಹ್ಮಣ್ಯ ಚಂಪಾ ಷಷ್ಠಿ ಸಂದರ್ಭದಲ್ಲಿ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂ. ಜಾ. ವೇ ವತಿಯಿಂದ ದೇವಳದ ಕಾರ್ಯನಿರ್ವಹಣಾಧಿಕಾರಿ ಮನವಿ – ಕಹಳೆ ನ್ಯೂಸ್
ಸುಬ್ರಹ್ಮಣ್ಯ : ಹಿಂದೂ ಧಾರ್ಮಿಕ ಕೇಂದ್ರ ಗಳಲ್ಲಿ ಯಾವುದೇ ಅನ್ಯ ಮತೀಯರಿಗೆ ವ್ಯಾಪಾರ ವಹಿವಾಟು ನಡೆಸುವಂತಿಲ್ಲ ಎಂಬ ಜಿಲ್ಲಾಧಿಕಾರಿ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಅದೇಶದನ್ವಯ ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಮಣ್ಯದ ಚಂಪಾಷಷ್ಠಿಯ ಸಂದರ್ಭದಲ್ಲಿ ಯಾವುದೇ ಅನ್ಯಮತೀಯರಿಗೆ ವ್ಯಾಪಾರ ವಹಿವಾಟುಗಳಿಗೆ ಅವಕಾಶ ನೀಡದಂತೆ ದೇವಳದ ಕಾರ್ಯನಿರ್ವಹಣಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು ಈ ಬಗ್ಗೆ ಆಡಳಿತ ಮಂಡಳಿ ಹಾಗೂ ವ್ಯವಸ್ಥಾಪನಾ ಸಮಿತಿಯು ನಿರ್ಣಯವನ್ನು ಕೈಗೊಂಡಿದ್ದು ಯಾವುದೇ ರೀತಿಯಲ್ಲಿ ಅವಕಾಶ ನೀಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು