ಕುಕ್ಕೆಶ್ರೀ ಸುಬ್ರಹ್ಮಣ್ಯ ಚಂಪಾಷಷ್ಟಿ ವಾರ್ಷಿಕ ಜಾತ್ರೋತ್ಸವ : ಸುಬ್ರಹ್ಮಣ್ಯದ ಹೋಟೆಲ್‌ಗಳಿಗೆ ಆರೋಗ್ಯ ಇಲಾಖೆಯಿಂದ ನೋಟಿಸ್ – ಕಹಳೆ ನ್ಯೂಸ್
ಸುಬ್ರಹ್ಮಣ್ಯ : ಕುಕ್ಕೆಶ್ರೀ ಸುಬ್ರಹ್ಮಣ್ಯ ಚಂಪಾಷಷ್ಟಿ ವಾರ್ಷಿಕ ಜಾತ್ರೋತ್ಸವವು ನಡೆಯುತ್ತಿರುವ ಈ ಸಂದರ್ಭದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಕ್ಷೇತ್ರಕ್ಕೆ ಆಗಮಿಸಿರುವುದರಿಂದ ಆರೋಗ್ಯ ಹಾಗೂ ನೈರ್ಮಲ್ಯ ಕಾಪಾಡಲು ಹಾಗೂ ಸುಚಿತ್ವ ಕಾಪಾಡುವ ದೃಷ್ಟಿಯಿಂದ ಸುಬ್ರಮಣ್ಯದ ಹೋಟೆಲ್ ಗಳಿಗೆ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಹೋಟೆಲ್ ಗಳು, ಬೇಕರಿ, ಸಣ್ಣ ಚಹಾದ ಅಂಗಡಿಗಳು, ಹಾಗೂ ಸಣ್ಣಪುಟ್ಟ ತಿಂಡಿ ತಿನಿಸುಗಳಿರುವ ಅಂಗಡಿಗಳನ್ನು ಹಾಗೂ ವಟಾರವನ್ನ ಶುಚಿಯಾಗಿ ಇಟ್ಟುಕೊಳ್ಳಬೇಕು, ಸಾರ್ವಜನಿಕರಿಗೆ ಕುಡಿಯಲು ಕುದಿಸಿ ಆರಿಸಿದ ನೀರನ್ನು ಒದಗಿಸುವುದು, ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಧೂಮಪಾನ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
ಧೂಮಪಾನ ನಿಷೇಧಿತ ಪ್ರದೇಶ ಎಂದು ಸೂಚಿಸುವ 60*45 ಸೆಂ.ಮೀ ಗಾತ್ರದ ಫಲಕವನ್ನು ಕಡ್ಡಾಯವಾಗಿ ಅಳವಡಿಸುವುದು. ಆಹಾರ ಪದಾರ್ಥಗಳನ್ನು ತೆರೆದಿಟ್ಟು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ, ಮತ್ತು ಕತ್ತರಿಸಿದ ಹಣ್ಣು ಹಂಪಲುಗಳನ್ನು ತೆರೆದಿಟ್ಟು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಅಲ್ಲದೆ ತ್ಯಾಜ್ಯ ವಸ್ತುಗಳ ವಿಲೇವಾರಿ ಸರಿಯಾದ ಕ್ರಮದಲ್ಲಿ ಮಾಡಬೇಕೆಂದು ವೈದ್ಯಾಧಿಕಾರಿಗಳು ನೋಟಿಸ್ ನಲ್ಲಿ ತಿಳಿಸಿದ್ದಾರೆ.
ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾಟ ತ್ರಿಮೂರ್ತಿ ಅವರ ಸೂಚನೆಯಂತೆ ಹಿರಿಯ ಆರೋಗ್ಯ ನಿರೀಕ್ಷಕರಾದ ಬಸವರಾಜ್ ಹಾಗೂ ಆರೋಗ್ಯ ನಿರೀಕ್ಷಕರಾದ ಉಮ್ಮರ್ ಖಾನ್ ಸುಬ್ರಹ್ಮಣ್ಯದ ಹೋಟೆಲ್ ಬೇಕರಿ ಸಣ್ಣ ಚಾಹದಂಗಡಿಗಳು ಸಣ್ಣಪುಟ್ಟ ತಿಂಡಿ ತಿನಿಸುಗಳ ಮಳಿಗೆಗಳಿಗೆ ಭೇಟಿ ನೀಡಿ ನೋಟಿಸ್ ನೀಡಿದ್ದಾರೆ.