ಪುತ್ತೂರು : ನಗರ ಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ನಡೆಯಲಿರುವ ಉಪ ಚುನಾವಣೆಗೆ ಸಂಬAಧಿಸಿದAತೆ ಜಿಲ್ಲಾಧಿಕಾರಿಗಳು ಡಿ.8 ರಂದು ಅಧಿಸೂಚನೆ ಹೊರಡಿಸಿದ್ದು, ಪುತ್ತಿಲ ಪರಿವಾರದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.
ಪುತ್ತಿಲ ಪರಿವಾರದಿಂದ ವಾರ್ಡ್ 11 ರ ಅಭ್ಯರ್ಥಿಯಾಗಿ ಹಂದ್ರಟ್ಟ ನಿವಾಸಿ ಆನಂದ ಎಂಬವರ ಪುತ್ರ ಚಿಂತನ್ ಪಿ. ರನ್ನು ಆಯ್ಕೆ ಮಾಡಲಾಗಿದೆ.ಅದೇ ರೀತಿ ನಗರಸಭೆಯ ವಾರ್ಡ್ 1 ರ ಅಭ್ಯರ್ಥಿಯಾಗಿ ಶೇವಿರೆ ನಿವಾಸಿ ಕೃಷ್ಣ ರಾವ್ ಎಂಬವರ ಪತ್ನಿ ಅನ್ನಪೂರ್ಣ ಎಸ್.ಕೆ.ಯವರನ್ನು ಆಯ್ಕೆ ಮಾಡಲಾಗಿದೆ.
ಈಗಾಗಲೇ ಗ್ರಾಮ ಪಂಚಾಯತ್ ಉಪಚುನಾವಣೆ, ಸಹಕಾರ ಸಂಘಗಳ ಚುನಾವಣೆಯಲ್ಲಿ ಪುತ್ತಿಲ ಪರಿವಾರದ ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದು, ನಗರಸಭೆ ಉಪಚುನಾವಣೆಯ ಅಖಾಡಕ್ಕೆ ಕೂಡ ಪುತ್ತಿಲ ಪರಿವಾರ ಎಂಟ್ರಿ ನೀಡಿದೆ.ನಗರ ಸಭೆಯ ವಾರ್ಡ್ 1 ರಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಿವರಾಮ ಸಪಲ್ಯ ಹಾಗೂ ವಾರ್ಡ್ 11ರಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಶಕ್ತಿ ಸಿನ್ಹಾ ರವರ ನಿಧನದಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಡಿ.8 ರಂದು ಜಿಲ್ಲಾಧಿಕಾರಿಗಳು ಅದಿಸೂಚನೆ ಪ್ರಕಟಗೊಳಿಸಲಿದ್ದು, ಅದೇ ದಿನ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಗೊAಡಿದೆ. ಡಿ.15 ನಾಮಪತ್ರ ಸಲ್ಲಿಸಲು ಅಂತಿಮ ದಿನವಾಗಿದೆ. ಡಿ.16ರಂದು ನಾಮಪತ್ರ ಪರಿಶೀಲನೆ, ಡಿ.18ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದೆ.
ಡಿ.27 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು ಬೆಳಿಗ್ಗೆ 7 ಗಂಟೆಯಿAದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ. ಅವಶ್ಯವಿದ್ದರೆ ಡಿ.29ರಂದು ಮರುಮತದಾನ ನಡೆದು ಡಿ.30 ರಂದು ಬೆಳಿಗ್ಗೆ 8 ಗಂಟೆಯಿAದ ಮತ ಎಣಿಕೆ ಪ್ರಕ್ರಿಯೆ ನಡೆದು ಫಲಿತಾಂಶ ಘೋಷಣೆಯಾಗಲಿದೆ.
ನಗರ ಸಭಾ ವ್ಯಾಪ್ತಿ ಹಾಗೂ ಉಪ ಚುನಾವಣೆ ನಡೆಯುವ ವಾರ್ಡ್ ಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ಡಿ.8 ರಿಂದ 30 ರ ತನಕ ಜಾರಿಯಲ್ಲಿರಲಿದೆ.