Sunday, January 26, 2025
ಸುದ್ದಿ

ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ನಡೆಯುವ ದತ್ತಜಯಂತಿ 2023ರ ಕಾರ್ಯಕ್ರಮದ ಅಮಂತ್ರಣ ಸಂತರಿಗೆ ವಿತರಣೆ – ಕಹಳೆ ನ್ಯೂಸ್

ಚಿಕ್ಕಮಗಳೂರು : ದತ್ತ ಜಯಂತಿ ಅಂಗವಾಗಿ ಚಿಕ್ಕಮಂಗಳೂರು ಚಂದ್ರದ್ರೋಣ ಪರ್ವತದಲ್ಲಿ ನಡೆಯುವ ದತ್ತಜಯಂತಿ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಗುರುಪುರ ವಜ್ರದೇಹಿ ಮಠದ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಂಯೋಜಕ್ ಸುನೀಲ್ ಕೆ.ಆರ್,ಬಜರಂಗದಳ ಪ್ರಾಂತ ಸಹ ಸಂಯೋಜಕ್ ಮುರಳಿ ಕೃಷ್ಣ ಹಸಂತಡ್ಕ, ಬಜರಂಗದಳ ಮಂಗಳೂರು ವಿಭಾಗ ಸಹ ಸಂಯೋಜಕ್ ಪುನೀತ್ ಅತ್ತಾವರ, ಬಜರಂಗದಳ ಪುತ್ತೂರು ನಗರ ಪ್ರಖಂಡ ಸಂಯೋಜಕ್ ಜಯಂತ್ ಕುಂಜೂರುಪಂಜ,ವಿಶ್ವ ಹಿಂದೂ ಪರಿಷದ್ ಪುತ್ತೂರು ನಗರ ಕಾರ್ಯದರ್ಶಿ ಜಿತೇಶ್ ಬಲ್ನಾಡ್,ಬಜರಂಗದಳ ಪುತ್ತೂರು ನಗರ ಸಹ ಸಂಯೋಜಕ ಪ್ರವೀಣ್ ಕಲ್ಲೇಗ, ಪುತ್ತೂರು ನಗರ ಸಹ ಸುರಕ್ಷಾ ಪ್ರಮುಖ್ ಜೀವನ್ ಆಚಾರ್ಯ, ಪುತ್ತೂರು ನಗರ ಸಾಪ್ತಯಿಕ್ ಮಿಲನ್ ಪ್ರಮುಖ್ ಧನರಾಜ್ ಬೆಳ್ಳಿಪ್ಪಾಡಿ, ವಿಶ್ವ ಹಿಂದೂ ಪರಿಷತ್ ಪ್ರಚಾರ ಪ್ರಮುಖ್ ಕೇಶವ ಪ್ರಸಾದ್, ನಾಗೇಶ್, ಸಂದೀಪ್ ಹಾಗೂ ಬಜರಂಗದಳದ ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು