Saturday, January 25, 2025
ಸುದ್ದಿ

ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾದ ಉಡುಪಿ ಮೂಲದ ವ್ಯಕ್ತಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಮಂಗಳೂರು: ರಾಜ್ಯ ಸರಕಾರದ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಟೆಸ್ಟಿಂಗ್ ಆರಂಭಿಸಿದ ಮೊದಲ ದಿನವೇ ಒಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಉಡುಪಿ ಮೂಲದ 82 ವರ್ಷದ ವೃದ್ಧರೋರ್ವರಲ್ಲಿ ಪಾಸಿಟಿವ್ ಪತ್ತೆಯಾಗಿದೆ.

ಮಂಗಳೂರಿನ ಖಾಸಗಿ ಆಸ್ಪತ್ರೆಗೆ ನರ ಸಂಬಂಧಿ ಕಾಯಿಲೆಗೆ ಬಂದಿರುವ ಅವರನ್ನು ಕೊರೊನಾ ತಪಾಸಣೆ ಮಾಡಿಸಿದಾಗ ಅದರಲ್ಲಿ ಪಾಸಿಟಿವ್ ಪತ್ತೆಯಾಗಿದೆ. ಪಾಸಿಟಿವ್ ಬಂದಿರೋ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ಗೆ ಅವರನ್ನು ದಾಖಲಿಸಲಾಗಿದ್ದು ಅಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು