Recent Posts

Sunday, January 19, 2025
ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಅನುದಾನ ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ಮನೆ ರಚನೆಯ  ಶಿಲಾನ್ಯಾಸ ಕಾರ್ಯಕ್ರಮ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಅನುದಾನ ಕಾರ್ಯಕ್ರಮದಡಿಯಲ್ಲಿ ಮಂಜೂರಾದ ಹಟ್ಟಿಯಂಗಡಿ ಕನ್ಯಾನ ನಿವಾಸಿ ಶ್ರೀಮತಿ ಜಟ್ಟೂರವರ ವಾತ್ಸಲ್ಯ ಮನೆ ರಚನೆ  ಶಿಲಾನ್ಯಾಸ ಕಾರ್ಯಕ್ರಮ.  ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಜಿಲ್ಲಾ ನಿರ್ದೇಶಕರಾದ ಮಾನ್ಯ ಶಿವರಾಯ ಪ್ರಭು, ಹಟ್ಟಿಯಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ರವರು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿದರು. 

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಜಿಲ್ಲಾ ಜನಜಾಗೃತಿ ವಲಯ ಅಧ್ಯಕ್ಷರಾದ ರಾಜೀವ ಶೆಟ್ಟಿ, ಯೋಜನಾಧಿಕಾರಿ ಶ್ರೀಮತಿ ಪಾರ್ವತಿ, ವಲಯ ಜನಜಾಗೃತಿ ಸದಸ್ಯರಾದ ಜಗದೀಶ್ ಆಚಾರ್ಯ, ಭಜನ ಮಂಡಳಿ ಅಧ್ಯಕ್ಷರಾದ ಉಮೇಶ್, ತಾಲೂಕು ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಸುಗುಣ ಎನ್. ಹವಲ್ದಾರ್, ವಲಯ ಮೇಲ್ವಿಚಾರಕರಾದ ಶ್ರೀಮತಿ ಪುಷ್ಪ ಜೋಗಿ, ಕಾಮಗಾರಿ ರಚನೆಯ ಮೇಸ್ತ್ರಿಗಳಾದ ಸುಧಾಕರ್ , ಸೇವಾ ಪ್ರತಿನಿಧಿ ಶ್ರೀಮತಿ ಜ್ಯೋತಿ ಶೆಟ್ಟಿ ಉಪಸ್ಥಿತರಿದ್ದರು.