Sunday, January 19, 2025
ಸುದ್ದಿ

ಗುಂಡು ಹಾರಿಸಿಕೊಂಡು ಅತ್ಮಹತ್ಯೆ ಮಾಡಿಕೊಂಡ ಕನ್ನಡಿಗ .

ಜಮ್ಮು ಕಾಶ್ಮೀರ: ಜಮ್ಮು ಕಾಶ್ಮೀರ ಅನಂತ್‌ನಾಗ್‌ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕನ್ನಡಿಗ ಯೋಧ ಗುಂಡು ಹಾರಿಸಿಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಮಾಧ್ಯಮ ವರದಿ ತಿಳಿಸಿದೆ.

ಬೆಂಗಳೂರಿನ ರಾಜಗೋಪಾಲ ನಗರದ ನಿವಾಸಿ ನರೇಂದ್ರ ಗುಂಡು ಹಾರಿಸಿಕೊಂಡ ಯೋಧ. ಕಳೆದ ಎರಡು ವರ್ಷಗಳಿಂದ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಯೋಧನ ಸಾವಿನ ಕುರಿತು ಸೇನೆಯ ಹಿರಿಯ ಅಧಿಕಾರಿಗಳು ಪೋಷಕರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಆದರೆ ನರೇಂದ್ರನ ತಾಯಿ ನನ್ನ ಮಗ ಯಾವುದೇ ಕಾರಣಕ್ಕೂ ಅತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಈ ಬಗ್ಗೆ ಸೂಕ್ತ‌ ತನಿಖೆಯಾಗಬೇಕು. ನನ್ನ ಮಗನ ಸಾವಿನ‌‌ ಕಾರಣ ತಿಳಿಯಬೇಕು ಎಂದು ಒತ್ತಾಯಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

Leave a Response