Saturday, April 5, 2025
ಸುದ್ದಿ

ವಿಕ ಹೈನು-ಸಿರಿ 2023-24ನೇ ಸಾಲಿನ ಪ್ರಶಸ್ತಿ ಪ್ರಧಾನ ಸಮಾರಂಭ : ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘಕ್ಕೆ ಅತ್ಯುತ್ತಮ ಹಾಲು ಉತ್ಪಾದಕರ ಸಹಕಾರಿ ಸಂಘ ಪ್ರಶಸ್ತಿ – ಕಹಳೆ ನ್ಯೂಸ್

ಬೆಳ್ತಂಗಡಿ : ವಿಕ ಹೈನು-ಸಿರಿ 2023-24 ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಮಂಗಳೂರಿನ ಪುರಸಭಾ ಭವನದಲ್ಲಿ ಇಂದು ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವಿಕ ಹೈನು-ಸಿರಿ 2023-24ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲೆಯ ಅತ್ಯುತ್ತಮ ಹಾಲು ಉತ್ಪಾದಕರ ಸಹಕಾರಿ ಸಂಘ ಪ್ರಶಸ್ತಿಯು ಬೆಳ್ತಂಗಡಿ ತಾಲೂಕಿನ ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘಕ್ಕೆ ದೊರತಿದ್ದು, ಸಂಘದ ಅಧ್ಯಕ್ಷೆ ರಾಜೇಶ್ವರೀ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಸಂಸದರಾದ ನಳಿನ್ ಕುಮಾರ್ ಕಟೀಲ್, ವಿಧಾನಸಭಾದ ಸಭಾಧ್ಯಕ್ಷರಾದ ಯುಟಿ ಖಾದರ್, ಮಂಗಳೂರು ದಕ್ಷಿಣ ಶಾಸಕರಾದ ವೇದವ್ಯಾಸ್ ಕಾಮತ್, ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ, ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ, ಮತ್ತಿತ್ತರರು ಉಪಸ್ಥಿತರಿದ್ದರು.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ