Saturday, November 23, 2024
ಸುದ್ದಿ

31ನೇ ಜಿಲ್ಲಾ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ಪುತ್ತೂರು : ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಬೆಂಗಳೂರು ಆಯೋಜಿಸಿರುವ ರಾಷ್ಟ್ರೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ ನವದೆಹಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಭಾರತ ಸರ್ಕಾರ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸಹಯೋಗದೊಂದಿಗೆ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ, ಉಜಿರೆಯಲ್ಲಿ ಡಿ.07ರಂದು ಜಿಲ್ಲಾ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶ ನಡೆಯಿತು.

ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದ 2 ತಂಡಗಳು ಭಾಗವಹಿಸಿದ್ದು, ಸೀನಿಯರ್ ವಿಭಾಗದಲ್ಲಿ ಅಭಿನವ್ ಆಚಾರ್ ಕೆ , 9ನೇ ತರಗತಿ ಹಾಗೂ ಶ್ರೀಜಿತ್ ಸಿ.ಎಚ್ , 9ನೇ ತರಗತಿ ಅವರ ತಂಡ “Areca Fibre Briquettes As Alternate Source Of Energy”  ಎಂಬ ಶೀರ್ಷಿಕೆಯಡಿ ವಿಜ್ಞಾನ ಯೋಜನೆ ಮಂಡಿಸಿ ಪ್ರಥಮ ಬಹುಮಾನ ಗಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಜೂನಿಯರ್ ವಿಭಾಗದಲ್ಲಿ ಸುಪ್ರಜಾ ರಾವ್ ಹಾಗೂ ಸಾನ್ವಿ ಎಸ್ ಪ್ರಭು ಅವರ ತಂಡ “Narikela The Healing” ಎಂಬ ಶೀರ್ಷಿಕೆಯಡಿ ವಿಜ್ಞಾನ ಯೋಜನೆ ಮಂಡಿಸಿ ದ್ವಿತೀಯ ಬಹುಮಾನ ಗಳಿಸಿದ್ದು, ಎರಡು ತಂಡಗಳು ಕೊಪ್ಪಳದಲ್ಲಿ ಜನವರಿ ತಿಂಗಳ ಮೊದಲ ವಾರ ನಡೆಯಲಿರುವ ರಾಜ್ಯ ಮಟ್ಟಕ್ಕೆ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು