Thursday, January 23, 2025
ಸುದ್ದಿ

ಕಲ್ಲಡ್ಕ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕ ಒಕ್ಕೂಟದ ವತಿಯಿಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕದಲ್ಲಿ ಶಾಲಾ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಶಾಲಾ ಆವರಣದ ಒಳಗೆ ಬೆಳೆದಿರುವ ಹುಲ್ಲು, ಗಿಡ ಗಂಟಿಗಳನ್ನು ಕಡಿದು ಸ್ವಚ್ಚತೆ ಮಾಡಲಾಯಿತು. ಶಾಲಾ ವಾರ್ಷಿಕೋತ್ಸವ ನಡೆಸುವ ಶಾಲಾ ಅಂಗಲವನ್ನು ಗುಡಿಸಿ ಸ್ವಚ್ಛ ಮಾಡಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಕಲ್ಲಡ್ಕ ವಲಯ ಮೇಲ್ವಿಚಾರಕಿ ಸುಗುಣ ಶೆಟ್ಟಿ, ವಲಯ ಅಧ್ಯಕ್ಷೆ ತುಳಸಿ, ಸೇವಾಪ್ರತಿನಿದಿಗಳಾದ ಗಣೇಶ್ ನೆಟ್ಲ, ವಿದ್ಯಾ, ಕಲ್ಲಡ್ಕ ಒಕ್ಕೂಟದ ಪ್ರಗತಿ ಬಂಧು ಸ್ವ ಸಹಾಯ ಸಂಘದ ಸದಸ್ಯರು, ಕಲ್ಲಡ್ಕ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಮಧುಸೂದನ್ ಭಟ್ ಹಾಗೂ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.