Wednesday, January 22, 2025
ಸುದ್ದಿ

ಡಿ.28 ಮತ್ತು 29ರಂದು ಕಳೆಂಜ – ದೇಂತಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಸೋದೆ ಮಠಾಧೀಶರು ಅನುಗ್ರಹಿಸಿ ಪ್ರತಿಷ್ಠಾಪಿಸಿದ ಕಳೆಂಜ – ದೇಂತಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಡಿ.28 ಮತ್ತು 29ರಂದು ವಾರ್ಷಿಕ ಜಾತ್ರೋತ್ಸವ ನಡೆಯಲಿದೆ.

ಡಿ.28ರಂದು ಬೆಳಿಗ್ಗೆ 10ಗಂಟೆಗೆ ಹಸಿರು ಹೊರಕಾಣಿಕೆ ಸಮರ್ಪಣೆ ಬಳಿಕ, ದೇವತಾ ಪ್ರಾರ್ಥನೆ, ಆಚಾರ್ಯವರಣ ಸ್ವಸ್ತಿ ಪುಣ್ಯಾಹವಾಚನ, ಮಹಾಗಣಪತಿ ಹೋಮ, ಚಂಡಿಕಾಹೋಮ, ಮಹಾವಿಷ್ಣುಯಾಗ ನಡೆಯಲಿದ್ದು, ಬಳಿಕ ಉಗ್ರಾಣ ಮೂಹೂರ್ತ, ಹೋಮದ ಪೂರ್ಣಾಹುತಿ, ಸುವಾಸಿನಿ ಪೂಜೆ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ಮಸಂತರ್ಪಣೆ, ಭಜನಾ ಕಾರ್ಯಕ್ರಮ, ರಂಗಪೂಜೆ, ಪ್ರಸಾದ ವಿರತಣೆ, ಅನ್ನಸಂತರ್ಪಣೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಡಿ.29ರಂದು ಮಹಾಗಣಪತಿ ಹೋಮ, ಕಲಶಪೂಜೆ, ಭಜನಾ ಕಾರ್ಯಕ್ರಮ, ಮದ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ ಹಾಗೂ ಕ್ಷೇತ್ರದ ದೈವಗಳಿಗೆ ಮತ್ತು ನಾಗದೇವರಿಗೆ ತಂಬಿಲ ಸೇವೆ, ತುಲಾಭಾರ ಸೇವೆ, ಮಹಾಪೂಜೆ ಪ್ರಸಾದವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಂಜೆ ವಿವಿಧ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ, ಮಹಾಪೂಜೆ, ಶ್ರೀ ದೇವರಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ, ದರ್ಶನ ಬಲಿ, ಬಟ್ಟಲು ಕಾಣಿಕೆ, ವೈದಿಕ ಮಂತ್ರಾಕ್ಷತೆ ನೇರವೇರಲಿದೆ.