Wednesday, January 22, 2025
ಸುದ್ದಿ

ಜ. 19ರಿಂದ 25ರವರೆಗೆ ನಡೆಯಲಿರುವ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಚಪ್ಪರ ಮುಹೂರ್ತ – ಕಹಳೆ ನ್ಯೂಸ್

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಜ. 19ರಿಂದ 25ರ ವರೆಗೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಧ್ವಜಸ್ತಂಭ ನಿಕ್ಷೇಪ ಕಾರ್ಯಕ್ರಮವು ಕ್ಷೇತ್ರದ ತಂತ್ರಿಗಳಾದ ವೇ.ಮೂ.ದಿನೇಶಕೃಷ್ಣ ತಂತ್ರಿ ವರ್ಕಾಡಿ ಅವರ ನೇತೃತ್ವದಲ್ಲಿ ಜರಗಿತು. ಬಳಿಕ ಬ್ರಹ್ಮಕಲಶ ಕಾರ್ಯಕ್ಕೆ ಚಪ್ಪರ ಮುಹೂರ್ತ ನೆರವೇರಿಸಲಾಯಿತು.

ಮಂಗಳೂರಿನ ಜ್ಯೋತಿಷ್ಯ ವಿದ್ವಾನ್ ಗಣೇಶ ಐತಾಳ್ ಮಂಗಳಾದೇವಿ, ಅಡ್ಡೂರು ಶ್ರೀ ಮುಖ್ಯಪ್ರಾಣ ದೇವಸ್ಥಾನದ ಮೊಕ್ತೇಸರ ನೂಯಿ ಬಾಲಕೃಷ್ಣ ರಾವ್, ಪುತ್ತೂರಿನ ಉದ್ಯಮಿ ಸಂಜೀವ ಆಳ್ವ ಪಡ್ಡಾಯಿಬೆಟ್ಟು, ನಿವೃತ್ತ ಪ್ರಾಧ್ಯಾಪಕ ಮಹಾಬಲ ಆಳ್ವ ಕಮ್ಮಾಜೆ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ದೇವಸ್ಥಾನದ ಪ್ರಧಾನ ಅರ್ಚಕ ಶಂಕರನಾರಾಯಣ ಹೊಳ್ಳ, ಪುರೋಹಿತ ವಿಜಯಕೃಷ್ಣ ಐತಾಳ್ ಪುಂಜೂರು, ಅರ್ಚಕ ಜಯರಾಮ ಕಾರಂತ ಪೂಜಾ ವಿಧಿ ವಿಧಾನ ನೆರವೇರಿಸಿದರು. ವಾಸ್ತುಶಿಲ್ಪಿ ಮಹೇಶ ಮುನಿಯಂಗಳ ಅವರ ಮಾರ್ಗದರ್ಶನದಲ್ಲಿ ಕೊಡಿಮರ ನಿಲ್ಲಿಸಲಾಯಿತು. ಕಾಷ್ಠಶಿಲ್ಪಿ ಹರೀಶ್ ಆಚಾರ್ಯ ಬೋಳಿಯಾರು, ಶಿಲಾಶಿಲ್ಪಿ ಅಶೋಕ್ ಕಾರ್ಕಳ, ಸಿವಿಲ್ ಎಂಜಿನಿಯರ್ ಶರತ್ ಸಹಕರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಂ.ಎಸ್.ಶೆಟ್ಟಿ ಸರಪಾಡಿ, ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಬ್ರಹ್ಮಕಲಶ ಸಮಿತಿ ಸಂಚಾಲಕ ಸಂಜೀವ ಪೂಜಾರಿ ಕಟ್ಟದಡೆ, ಪ್ರಧಾನ ಕಾರ್ಯದರ್ಶಿ ಸರಪಾಡಿ ಅಶೋಕ ಶೆಟ್ಟಿ, ಮಣಿನಾಲ್ಕೂರು ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ರಾಧಾಕೃಷ್ಣ ಮಯ್ಯ ಕೈಯೊಟ್ಟು, ದೇವಸ್ಥಾನದ ಮೊಕ್ತೇಸರರು, ಜೀರ್ಣೋದ್ಧಾರ, ಬ್ರಹ್ಮಕಲಶ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.