Sunday, November 24, 2024
ಸುದ್ದಿ

ನೆಹರೂ ಮೆಮೋರಿಯಲ್ ಪದವಿ ಕಾಲೇಜಿನಲ್ಲಿ ಸಾಂಸ್ಕøತಿಕ ಉತ್ಸವ ಪರಂವಃ 2023 ಕಾರ್ಯಕ್ರಮ – ಕಹಳೆ ನ್ಯೂಸ್

ಸುಳ್ಯ: ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳನ್ನು ಜೊತೆ ಜೊತೆಯಾಗಿ ತೆಗೆದುಕೊಂಡು ವಿದ್ಯಾರ್ಥಿಗಳು ತಮ್ಮಲ್ಲಿರುವ ಸ್ತುಪ್ತವಾದ ಪ್ರತಿಭೆಗಳನ್ನು ಪ್ರಕಟಪಡಿಸಿಕೊಂಡಾಗ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬಹುದು ಎಂದು ಅಕಾಡಮಿ ಆಫ್ ಲಿಬರಲ್ ಎಜುಕೇಷನ್ ಸುಳ್ಯದ ಉಪಾಧ್ಯಕ್ಷೆ ಶ್ರೀಮತಿ ಶೋಭಾ ಚಿದಾನಂದ ಹೇಳಿದರು. ಇವರು ನೆಹರೂ ಮೆಮೋರಿಯಲ್ ಪದವಿ ಕಾಲೇಜಿನಲ್ಲಿ ಹಮ್ಮಿಕೊಂಡ ಸಾಂಸ್ಕೃತಿಕ ಉತ್ಸವ ಪರಂವ್ಹ 2023ರ ಅಧ್ಯಕ್ಷತೆ ವಹಿಸಿ ಉದ್ಘಾಟಿಸಿ ಮಾತನಾಡಿದರು.

ಉದ್ಘಾಟನಾ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾಲೇಜು ಆಂತರಿಕ ಗುಣಮಟ್ಟ ಖಾತ್ರಿ ಕೋಶದ ಸಂಯೋಜಕಿ ಡಾ. ಮಮತಾ ಕೆ. ಸ್ವಾಗತಿಸಿ, ಇತಿಹಾಸ ವಿಭಾಗದ ಮುಖ್ಯಸ್ಥರಾದ ತಿಪ್ಪೇಸ್ವಾಮಿ ಡಿ ವಂದಿಸಿದರು.
ವೇದಿಕೆಯಲ್ಲಿ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪೆÇ್ರ. ಬಾಲಚಂದ್ರ ಗೌಡ ಎಂ, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಶ್ರೀಮತಿ ರತ್ನಾವತಿ ಡಿ., ಸಾಂಸ್ಕೃತಿಕ ಸಂಘದ ಸಂಯೋಜಕ ವಿಷ್ಣುಪ್ರಶಾಂತ್ ಬಿ. ಉಪಸ್ಥಿತರಿದ್ದರು. ಕು. ರತ್ನ ಸಿಂಚನ ಮತ್ತು ತಂಡದವರು ಪ್ರಾರ್ಥಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಂಜೆ ನಡೆದ ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿಯ ಕಾರ್ಯದರ್ಶಿ ಹೇಮನಾಥ ಕುರುಂಜಿ ವಹಿಸಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿದರು. ಸಾಂಸ್ಕೃತಿಕ ಉತ್ಸವದ ಚಾಂಪಿಯನ್ ಪ್ರಶಸ್ತಿಯನ್ನು ರೋಟರಿ ಪದವಿ ಪೂರ್ವ ಕಾಲೇಜು ಪಡೆದುಕೊಂಡು, ರನ್ನರ್ಸ್ ಪ್ರಶಸ್ತಿಯನ್ನು ಎನ್ನೆಂಸಿ ಪದವಿ ಪೂರ್ವ ಕಾಲೇಜು ಸುಳ್ಯ ಪಡೆದುಕೊಂಡಿತು. ಬಹುಮಾನ ವಿಜೇತರ ಪಟ್ಟಿಯನ್ನು ಹರಿಪ್ರಸಾದ್ ವಾಚಿಸಿದರು. ಕಾರ್ಯಕ್ರಮವನ್ನು ಕನ್ನಡ ವಿಭಾಗದ ಉಪನ್ಯಾಸಕಿ ಡಾ. ಅನುರಾಧ ಕೆ ನಿರೂಪಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಕಾಲೇಜು ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಮತ್ತು ಎಲ್ಲಾ ತರಗತಿ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳು ಸಹಕರಿಸಿದರು.