Thursday, January 23, 2025
ಸುದ್ದಿ

ಪಾಳುಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರ ಪತ್ತೆ..!! ಚಿತ್ರದುರ್ಗದ ಜನರಲ್ಲಿ ಆತಂಕ.. – ಕಹಳೆ ನ್ಯೂಸ್

ಚಿತ್ರದುರ್ಗ : ಚಳ್ಳಕೆರೆ ಗೇಟ್ ಬಳಿ ಜೈಲ್ ರಸ್ತೆಯಲ್ಲಿರುವ ಪಾಳುಬಿದ್ದ ಮನೆಯಲ್ಲಿ ಮೂರಲ್ಲ ಬರೋಬ್ಬರಿ ಐದು ಅಸ್ಥಿಪಂಜರಗಳು ಪತ್ತೆಯಾಗಿದ್ದು, ಈ ಬಗ್ಗೆ ಪವನ್ ಕುಮಾರ್ ಎಂಬುವರು ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ಪಾಳುಬಿದ್ದ ಮನೆಯಲ್ಲಿ ಪವನ್ ಕುಮಾರ್ ಸಂಬಂಧಿ ಜಗನ್ನಾಥರೆಡ್ಡಿ ಮತ್ತು ಕುಟುಂಬದವರು ವಾಸವಾಗಿದ್ದು, ಜಗನ್ನಾಥ ರೆಡ್ಡಿ, ಪತ್ನಿ ಪ್ರೇಮಕ್ಕ, ಪುತ್ರಿ ತ್ರಿವೇಣಿ, ಪುತ್ರ ಕೃಷ್ಣರೆಡ್ಡಿ, ನರೇಂದ್ರರೆಡ್ಡಿ ಎಂಬ ಐವರು ವಾಸವಾಗಿದ್ದರು. ಇನ್ನೂ ಘಟನೆ ಕುರಿತು ಸ್ಥಳೀಯರೊಬ್ಬರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಪಾಳುಬಿದ್ದ ಮನೆಯಲ್ಲಿ ಪರಿಶೀಲನೆ ನಡೆಸಿದ್ದು ಮೊದಲಿಗೆ ಮೂವರ ಅಸ್ತಿ ಪಂಜರ ಇರುವುದಾಗಿ ಅಂದಾಜಿಸಲಾಗಿದ್ದು ಪರಿಶೀಲನೆ ನಂತರ ಮೂರಲ್ಲ ಬರೋಬ್ಬರಿ ಐದು ಅಸ್ಥಿಪಂಜರಗಳು ದೊರೆತಿವೆ. ಸ್ಥಳಕ್ಕೆ ಡಿವೈಎಸ್‍ಪಿ ಪಿ.ಅನಿಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಸಾವು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುವುದರ ಕುರಿತು ಹೆಚ್ಚಿನ ಮಾಹಿತಿ ಸಿಗಬೇಕಿದೆ. ಸದ್ಯ ಅಸ್ಥಿಪಂಜರಗಳನ್ನು ಎಫ್‍ಎಸ್‍ಎಲ್ ಪರೀಕ್ಷೆಗೆ ಕಳಿಸಲು ತೀರ್ಮಾನಿಸಲಾಗಿದೆ. ಪೊಲೀಸರ ಸೂಕ್ತ ತನಿಖೆ ಬಳಿಕವಷ್ಟೇ ಐದು ಅಸ್ಥಿಪಂಜರಗಳ ಹಿನ್ನೆಲೆ ಗೊತ್ತಾಗಲಿದೆ.