Wednesday, January 22, 2025
ಸುದ್ದಿ

ಉಪ್ಪಿನಂಗಡಿ : ಹೃದಯಾಘಾತದಿಂದ ಲಾರಿಯೊಳಗೆ ಮೃತಪಟ್ಟ ಚಾಲಕ : 2 ದಿನಗಳ ಬಳಿಕ ಬೆಳಕಿಗೆ ಬಂದ ಪ್ರಕರಣ – ಕಹಳೆ ನ್ಯೂಸ್

ಉಪ್ಪಿನಂಗಡಿ: ರಾತ್ರಿ ಲಾರಿ ನಿಲ್ಲಿಸಿ ಮಲಗಿದ್ದ ಚಾಲಕ ಲಾರಿಯಲ್ಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯ ಉಪ್ಪಿನಂಗಡಿಯಲ್ಲಿ ನಡೆದಿದೆ.

ಮೈಸೂರು ಜಿಲ್ಲೆಯ ಚೆನ್ನಪಟ್ಟಣದ ಖಲೀಲ್ ಖಾನ್ (58) ಮೃತ ವ್ಯಕ್ತಿ ಮೈಸೂರಿನಿಂದ ಬಿ.ಸಿ.ರೋಡಿಗೆ ಹಾಸಿಗೆಯ ಲೋಡನ್ನು ಲಾರಿಯಲ್ಲಿ ತಂದಿದ್ದ ಖಲೀಲ್, ಲೋಡ್ ಖಾಲಿ ಮಾಡಿ ಎರಡು ದಿನಗಳ ಹಿಂದೆ ರಾತ್ರಿ ಉಪ್ಪಿನಂಗಡಿಯ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಲಾರಿ ನಿಲ್ಲಿಸಿ ಮಲಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಲಾರಿಯ ಕ್ಯಾಬಿನ್‍ನ ಬಾಗಿಲು ಹಾಕಿದ್ದರಿಂದ ಚಾಲಕ ಲಾರಿಯೊಳಗೆ ಮೃತಪಟ್ಟಿದ್ದು, ಯಾರ ಗಮನಕ್ಕೂ ಬಂದಿರಲಿಲ್ಲ. ಆದರೆ ಡಿ.29ರಂದು ಲಾರಿಯಿಂದ ವಾಸನೆ ಬರಲಾರಂಭಿಸಿದ್ದು, ಸಂಶಯಗೊಂಡ ಸ್ಥಳೀಯರು ಪರಿಶೀಲಿಸಿದಾಗ ಲಾರಿ ಚಾಲಕ ಮಲಗಿದ್ದಲ್ಲೇ ಮೃತಪಟ್ಟ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ಲಾರಿಯಿಂದ ಲಾರಿ ಚಾಲಕನ ಮೃತದೇಹವನ್ನು ತೆಗೆದು, ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು