Wednesday, January 22, 2025
ಸುದ್ದಿ

ಡಿ.30ರಂದು (ನಾಳೆ) ಕಡಬ-ಬಿಳಿನೆಲೆಯ ಪುತ್ತಿಲಬೈಲಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಮತ್ತು ಕ್ರೀಡೋತ್ಸವ2023-24 – ಕಹಳೆ ನ್ಯೂಸ್

ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಪುತ್ತಿಲಬೈಲಡ್ಕದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾಲರಶ್ಮಿ ಹಳೆ ವಿದ್ಯಾರ್ಥಿ ಸಂಘ ಹಾಗೂ ಅಂಗನವಾಡಿ ಕೇಂದ್ರ ಹಾಗೂ ಊರವರ ಜಂಟಿ ಸಹಕಾರದಲ್ಲಿ ಡಿ.30ರಂದು ಶಾಲಾ ವಾರ್ಷಿಕೋತ್ಸವ ಮತ್ತು ಕ್ರೀಡೋತ್ಸವ 2023-24 ಪುತ್ತಿಲಬೈಲಡ್ಕದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ.

ಬಿಳಿನೆಲೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶಿವಶಂಕರ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಪುತ್ತಿಲಬೈಲಡ್ಕ ಎಸ್.ಡಿ.ಎಂ.ಸಿ. ಅಧ್ಯಕ್ಷ ವೆಂಕಟೆಮಣ ಗೌಡ ಬೈಲು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಡಶಾಲಾ ದೈಹಿಕ ಶಿಕ್ಷಕ ವಿನಯ್ ಕುಮಾರ್ ಧ್ವಜಾರೋಹಣ ನಡೆಸಲಿದ್ದು, ಬಂಟ್ರ ಕ್ಲಸ್ಟರ್ ನ ಸಿಆರ್.ಪಿ ಕುಮಾರ್ ಸಿಜೆ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಸಂಜೆ ಬಿಳಿನೆಲೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಾರದ ದಿನೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಸುಳ್ಯ ವಿಧಾನಸಭಾ ಶಾಸಕಿ ಕು. ಭಾಗೀರಥಿ ಮುರುಳ್ಯ ಅವರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಬಿಳಿನೆಲೆ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಸುಧೀರ್ ಕುಮಾರ್ ಶೆಟ್ಟಿ ಸ್ಫರ್ಧಾ ವಿಜೇತರಿಗೆ ಬಹುಮಾನ ವಿತರಿಸಲಿದ್ದು, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಮುಖ್ಯ ಅತಿಥಿಯಾಗಿ ಉಪಸ್ಥಿತಲಿರಲಿದ್ದಾರೆ. ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ವಿಶ್ವನಾಥ ರೈ ದಿಕ್ಸೂಚಿ ಭಾಷಣ ಮಾಡಲಿದ್ದು, ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

ಸಭಾ ಕಾರ್ಯಕ್ರಮದ ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ಹಾಗು ಸಂಗೀತರಸ ಮಂಜರಿ ನಡೆಯಲಿದ್ದು, ಬಳಿಕ ಬಿಸಿರೋಡ್ ನ ಓಂ ಶ್ರೀ ಕಲಾತಂಡದವರಿಂದ “ಅಂದಂಡ ಅಂದ್ ಪನ್ಲೆ” ಎಂಬ ತುಳು ನಾಟಕ ನಡೆಯಲಿದೆ.