Wednesday, January 22, 2025
ಸುದ್ದಿ

ಕಾಪು ಕಿಶೋರ ಯಕ್ಷಗಾನ ಸಂಭ್ರಮ – 2023 ಸಮಾರೋಪ ಸಮಾರಂಭ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಯಕ್ಷ ಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಇವರು ತರಬೇತಿ ನೀಡಿದ ಕಾಪು ಭಾಗದ ಪ್ರೌಢಶಾಲೆಗಳ ವಿದ್ಯಾರ್ಥಿಗಳ ಯಕ್ಷಗಾನ ಪ್ರದರ್ಶನ “ಕಿಶೋರ ಯಕ್ಷಗಾನ ಸಂಭ್ರಮ – 2023” ಇದರ ಸಮಾರೋಪ ಸಮಾರಂಭ  ಶಿರ್ವಾ ಮಹಿಳಾ ಸೌಧದ ಬಳಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಶಾಸಕರು, ಕಾಪು ಪ್ರದರ್ಶನ ಸಂಘಟನಾ ಸಮಿತಿ ಅಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು.

ಯಕ್ಷ ಶಿಕ್ಷಣ ಟ್ರಸ್ಟ್ (ರಿ.) ಉಡುಪಿ, ಪ್ರದರ್ಶನ ಸಂಘಟನಾ ಸಮಿತಿ,ಶಿರ್ವ ವತಿಯಿಂದ ಆಯೋಜಿಸಲಾದ ಈ “ಕಿಶೋರ ಯಕ್ಷಗಾನ – 2023” ಶಿರ್ವಾ ಮಹಿಳಾ ಸೌಧದ ಬಳಿ ದಿನಾಂಕ 25-12-2023 ರಿಂದ 29-12-2023 ರ ವರೆಗೆ ಸಂಜೆ 5.30 ರಿಂದ ರಾತ್ರಿ 9.00 ರ ವರೆಗೆ ದಿನಕ್ಕೆ ಎರಡು ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಎರಡು ಪ್ರಸಂಗಗಳಂತೆ ನಡೆಯಿತು.

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಕಲಾಪೋಷಕರಾದ ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ, ಶಿರ್ವ ಮಹಿಳಾ ಮಂಡಳಿಯ ಗೌರವಾಧ್ಯಕ್ಷರಾದ ಬಬಿತಾ ಜೆ ಅರಸ, ಮಂದಾರ ಹೋಟೆಲ್ ನ ಮನೋಹರ್ ಶೆಟ್ಟಿ, ನಿವೃತ್ತ ಶಿಕ್ಷಕರಾದ ರಮಾನಾಥ ಪಾಟ್ಕರ್, ರತ್ನಾಕರ ರಾವ್, ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ ಗಂಗಾಧರ ರಾವ್, ಯಕ್ಷ ಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಶಿರ್ವ ಪ್ರದರ್ಶನಾ ಸಂಘಟನಾ ಸಮಿತಿ ಸಂಯೋಜಕರಾದ ವಿ.ಜಿ ಶೆಟ್ಟಿ, ಕೋಶಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.