Wednesday, January 22, 2025
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಪುತ್ತೂರು ನಗರಸಭಾ ಉಪ ಚುನಾವಣೆ – ವಾರ್ಡ್ 11 ರಲ್ಲಿ ಬಿಜೆಪಿ, ವಾರ್ಡ್ 1 ರಲ್ಲಿ ಕಾಂಗ್ರೆಸ್ ಗೆಲುವು ; ಎರಡೂ ಕಡೆಯೂ ಪುತ್ತಿಲ ಪರಿವಾರಕ್ಕೆ ಸೋಲು – ಕಹಳೆ ನ್ಯೂಸ್

ಪುತ್ತೂರು: ನಗರ ಸಭಾ ತೆರವಾದ ಎರಡು ಸ್ಥಾನಗಳಿಗೆ ನಡೆಸ ಉಪ ಚುನಾವಣೆಯಲ್ಲಿ ವಾರ್ಡ್ -11 ಬಿಜೆಪಿಯ ರಮೇಶ್ ರೈ ಹಾಗೂ ವಾರ್ಡ್ 1ರಲ್ಲಿ ಕಾಂಗ್ರೆಸ್ ನ ದಿನೇಶ್ ಶೇವಿರೆ ಜಯಭೇರಿ ಭಾರಿಸಿದ್ದಾರೆ.

ವಾರ್ಡ್ 11 ರಲ್ಲಿ ಚಲಾವಣೆಯಾದ ಒಟ್ಟು 1053 ಮತಗಳಲ್ಲಿ ಬಿಜೆಪಿಯ ರಮೇಶ್ ರೈ 431, ಕಾಂಗ್ರೆಸ್ ನ ದಾಮೋದರ ಭಂಡಾರ್ ಕರ್ 400, ಪುತ್ತಿಲ ಪರಿವಾರದ ಚಿಂತನ್ 216 ಮತಗಳನ್ನು ಪಡೆದು ಕೊಂಡಿದ್ದಾರೆ. 6ಮತ ನೋಟ ಕ್ಕೆ ಚಲಾವಣೆಯಾಗಿದೆ. ಬಿಜೆಪಿ ರಮೇಶ್ ರೈ 31 ಮತಗಳ ಅಂತದಲ್ಲಿ ಜಯಗಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಾರ್ಡ್ 1ರಲ್ಲಿ ಚಲಾವಣೆಯಾದ ಒಟ್ಟು 958 ಮತಗಳಲ್ಲಿ ಕಾಂಗ್ರೆಸ್ ನ ದಿನೇಶ್ ಶೇವಿರೆ 427, ಬಿಜೆಪಿಯ ಸುನೀತಾ 219 ಹಾಗೂ ಪುತ್ತಿಲ ಪರಿವಾರದ ಅನ್ನಪೂರ್ಣ 308 ಮತಗಳನ್ನು ಪಡೆದುಕೊಂಡಿದ್ದಾರೆ. 4 ಮತ ನೋಟಕ್ಕೆ ಚಲಾವಣೆಯಾಗಿದೆ. ಕಾಂಗ್ರೆಸ್ ನ ದಿನೇಶ್ ಶೇವಿರೆ 119 ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು