Friday, September 20, 2024
ಸುದ್ದಿ

ಕೊಲ್ಲೂರು ದೇವಸ್ಥಾನದ ಲಕ್ಷ್ಮಿ ಮಂಟಪವನ್ನು ಪ್ರವೇಶಿಸಿದ ಮಹಿಳಾ ಅಧಿಕಾರಿ – ಕಹಳೆ ನ್ಯೂಸ್

ಉಡುಪಿ: ಶಬರಿಮಲೆಗೆ ಮಹಿಳೆಯರ ಪ್ರವೇಶ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ವಿರುದ್ಧ ಕೇರಳ ಸೇರಿದಂತೆ ದೇಶದೆಲ್ಲೆಡೆ ಭಾರೀ ಪ್ರತಿಭಟನೆಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿಯೇ ಶ್ರೀ ಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಲಕ್ಷ್ಮಿ ಮಂಟಪವನ್ನು ಮಹಿಳಾ ಅಧಿಕಾರಿ ಒಬ್ಬರು ಪ್ರವೇಶಿಸಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ.

ಮಹಿಳಾ ಅಧಿಕಾರಿ ಲಕ್ಷ್ಮಿ ಮಂಟಪ ಪ್ರವೇಶಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ಈ ಕುರಿತ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಮಾಜಿ ಆಡಳಿತಾಧಿಕಾರಿಯಾಗಿದ್ದ ಉಮಾ ಅವರು ದೇವಾಲಯದ ಲಕ್ಷ್ಮಿ ಮಂಟಪ ಪ್ರವೇಶಿಸಿದ್ದಾರೆ. ದೇವಸ್ಥಾನದ ಒಳಗೆ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ.

ಜಾಹೀರಾತು

ಮಹಿಳಾ ಅಧಿಕಾರಿ ಲಕ್ಷ್ಮಿ ಮಂಟಪ ಪ್ರವೇಶಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದಂತೆ ಕ್ಷೇತ್ರದ ಭಕ್ತರಿಂದ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ದಸರಾದ ನವರಾತ್ರಿ ಸಂದರ್ಭದಲ್ಲಿ ಕೊಲ್ಲೂರಿನಲ್ಲಿ ಮಹಿಳೆಯರಿಗೆ ಬಾಗಿನ ಕೊಡುವ ಸಂಪ್ರದಾಯ ಇದೆ. ನವರಾತ್ರಿಯ ಮೊದಲ ದಿನ ಒಬ್ಬರಿಗೆ, ಎರಡನೇ ದಿನ ಇಬ್ಬರಿಗೆ ಹೀಗೆ ಕ್ರಮವಾಗಿ ನೀಡುತ್ತಾ ಬಂದು ಕೊನೆ 9ನೇ ದಿನ ಗ್ರಾಮದ 9 ಬ್ರಾಹ್ಮಣ ಮಹಿಳೆಯರಿಗೆ ಬಾಗಿನ ಕೊಡುವ ಸಂಪ್ರದಾಯವಿದೆ. ಆ ಸಂದರ್ಭದಲ್ಲಿ ಮಾತ್ರ ಮಹಿಳೆಯರು ಲಕ್ಷ್ಮೀ ಮಂಟಪ ಪ್ರವೇಶಿಸಬಹುದು.