ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣಾ PSI ಹಾಗೂ ASI ಗಳಿಗೆ ಪೋಕೋ ಕಾಯಿದೆ, ಬಾಲನ್ಯಾಯ ಕಾಯಿದೆ ಕುರಿತು ಒಂದು ದಿನದ ಕಾರ್ಯಾಗಾರ – ಕಹಳೆ ನ್ಯೂಸ್
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಯ PSI ಮತ್ತು ASI ಗಳಿಗೆ ಮಕ್ಕಳ ವಿಶೇಷ ಪೊಲೀಸ್ ಘಟಕ, ಬಾಲನ್ಯಾಯ ಕಾಯಿದೆ, ಪೋಕೋ ಕಾಯಿದೆ ಕುರಿತು ಒಂದು ದಿನದ ಕಾರ್ಯಾಗಾರ ನಡೆಯಿತು.
ಕಾರ್ಯಾಗಾರದಲ್ಲಿ ಉತ್ತರ ಕನ್ನಡ ಜಿಲ್ಲೆಯ ಮಾನ್ಯ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಮಹಂತೇಶ ಸಂಗಪ್ಪ ದರ್ಗ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಯಕುಮಾರ್, ಹಿರಿಯ ಮಕ್ಕಳ ಪೊಲೀಸ್ ಕಲ್ಯಾಣಾಧಿಕಾರಿ ವೆಲೆಂಟನ್ ಡಿಸೋಜಾ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶ್ರೀಮತಿ ಸೋನಲ್ ಎಸ್ ಐಗಳ್ ಉಪಸ್ಥಿತರಿದ್ದರು.
ಪೊಲೀಸ್ ಠಾಣೆಗಳನ್ನು ಮಕ್ಕಳ ಸ್ನೇಹಿಯಾಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ. ಈ ಬಗ್ಗೆ ಆಯೋಗ ಗಂಭೀರ ಪ್ರಯತ್ನ ಮಾಡಲಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕು ರಕ್ಷಾಣ ಆಯೋಗ ಸದಸ್ಯ ಆಡಿ ತಿಪ್ಪೇಸ್ವಾಮಿ ಹೇಳಿದರು.