Wednesday, January 22, 2025
ಸುದ್ದಿ

ಹೊಸ ವರ್ಷಕ್ಕೆ ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್ : ಎಲ್.ಪಿ.ಜಿ. ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ – ಕಹಳೆ ನ್ಯೂಸ್

ಬೆಂಗಳೂರು : ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಿರುವ ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ದೈನಂದಿನ ಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಕೊಂಚ ಮಟ್ಟಿಗೆ ರಿಲೀಫ್ ಸಿಕ್ಕಂತಾಗಿದ್ದು, ಇದೀಗ ವಾಣಿಜ್ಯ ಬಳಕೆಯ ಎಲ್.ಪಿ.ಜಿ. ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ.

ತೈಲ ಮಾರುಕಟ್ಟೆ ಕಂಪನಿಗಳು ಜನವರಿ 1ರ ಎಲ್.ಪಿ.ಜಿ. ಸಿಲಿಂಡರ್ ಬೆಲೆಯನ್ನು ಬಿಡುಗಡೆ ಮಾಡಿದ್ದು, 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಇಳಿಕೆ ಕಂಡಿದೆ. ದೆಹಲಿಯಲ್ಲಿ 19 ಕೆಜಿ ತೂಕದ ಸಿಲಿಂಡರ್ ದರ 1755.50 ರೂಪಾಯಿಯಾಗಿದ್ದು, 1.50 ರೂ.ಗಳಷ್ಟುದರ ಇಳಿಕೆ ಕಂಡಿದೆ. ಅದೇ ರೀತಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 19 ಕೆಜಿ ಸಿಲಿಂಡರ್ ಬೆಲೆ 1,839 ರೂಪಾಯಿಯಾಗಿದ್ದು, 4 ರೂಪಾಯಿ ಇಳಿಕೆ ಕಂಡಿದೆ. ಅದೇ ರೀತಿ, 14 ಕೆಜಿ ಸಿಲಿಂಡರ್ ಬೆಲೆ 905.50 ರೂಪಾಯಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೋಲ್ಕತ್ತಾದಲ್ಲಿ ಎಲ್.ಪಿ.ಜಿ. ಸಿಲಿಂಡರ್ ದರ 1868.50 ರೂ. ಆಗಿದ್ದು, ಮುಂಬೈನಲ್ಲಿ 1,710 ರೂಪಾಯಿಯಾಗಿದ್ದರೆ, ಚೆನ್ನೈನಲ್ಲಿ 1929 ರೂಪಾಯಿಯಾಗಿದೆ. ಇದನ್ನು ಹೊರತುಪಡಿಸಿ ಗೃಹ ಬಳಕೆಯ 14 ಕೆಜಿ ಸಿಲಿಂಡರ್ ಬೆಲೆ ಆಗಸ್ಟ್ ದರವೇ ಮುಂದುವರಿದಿದ್ದು, ಸದ್ಯ, 14 ಕೆಜಿ ಸಿಲಿಂಡರ್ 903 ರೂಪಾಯಿಗೆ ಸಿಗಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು