Wednesday, January 22, 2025
ಸುದ್ದಿ

ಅಮರಶಿಲ್ಪಿ ಜಕಣಾಚಾರ್ಯ ಸಂಸ್ಮರಣಾ ದಿನಾಚರಣೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ತಾಲೂಕು ಆಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಆಶ್ರಯದಲ್ಲಿ ಇಂದು ಕಾಪು ಶ್ರೀ ಕಾಳಿಕಾಂಬ ದೇವಸ್ಥಾನದ ಶ್ರೀ ನಾಗಲಿಂಗ ಸ್ವಾಮಿ ಸಭಾಭವನದಲ್ಲಿ ನಡೆದ “ಅಮರಶಿಲ್ಪಿ ಜಕಣಾಚಾರ್ಯ ಸಂಸ್ಮರಣಾ ದಿನಾಚರಣೆ” ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾರ್ಯಕ್ರಮನ್ನು ಅಧ್ಯಕ್ಷತೆ ವಹಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಶಾಸಕರು ಮಾತನಾಡಿ ಒಂದು ಕಲ್ಲನ್ನು ಕೆತ್ತಿ ಅದಕ್ಕೆ ರೂಪವನ್ನು ನೀಡುವ ಕಲೆ ಇರುವುದು ಶಿಲ್ಪಗೆ ಮಾತ್ರ. ಕಲೆ ಮತ್ತು ವಾಸುಶಿಲ್ಪ ಕ್ಷೇತ್ರಕ್ಕೆ ಅಮರ ಶಿಲ್ಪಿ ಜಕಣಾಚಾರ್ಯರ ಕೊಡುಗೆ ಅಪಾರ ಎಂದರು.

ಈ ಸಂದರ್ಭದಲ್ಲಿ ಕಾಪು ಶ್ರೀ ಕಾಳಿಕಾಂಬ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶೇಖರ ಆಚಾರ್ಯ, ಶ್ರೀ ಕಾಳಿಕಾಂಬ ವಿಶ್ವಬ್ರಾಹ್ಮಣ ಯುವ ಸಂಘಟನೆ (ರಿ.) ಕಾಪು ಅಧ್ಯಕ್ಷರಾದ ಸುಧಾಕರ ಆಚಾರ್ಯ ಬಿಳಿಯಾರು, ದಿನೇಶ್ ಆಚಾರ್ಯ ಎರ್ಮಾಳು, ಕಾಪು ತಹಶೀಲ್ದಾರರಾದ ಪ್ರತಿಭಾ ಆರ್, ಕಾಪು ತಾಲೂಕು ಪಂಚಾಯತ್ ಪ್ರಭಾರ ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ ಉಪಸ್ಥಿತರಿದ್ದರು.