ಮೈಸೂರು: ಜನಮನ ಸೆಳೆಯುವ, ಕಣ್ಮನ ತಣಿಸುವ, ಸಾಂಸ್ಕೃತಿಕ ಶ್ರೀಮಂತಿಕೆಯ ದಸರಾ ಜಂಬೂಸವಾರಿಗೆ ಅರಮನೆಗಳ ನಗರಿಯ ರಾಜಪಥ ಸಿಂಗಾರಗೊಂಡಿದೆ.
ಬೆಳಕಿನ ವೈಭವ ಅದಕ್ಕೆ ಮತ್ತಷ್ಟು ಮೆರುಗು ತುಂಬಿದ್ದು 750 ಕೆ.ಜಿ. ಚಿನ್ನದ ಅಂಬಾರಿ ಹೊತ್ತು ಸಾಗುವ ಕ್ಯಾಪ್ಟನ್ ಅರ್ಜುನ ಸಾರಥ್ಯದ ಗಜಪಡೆಯ ವಯ್ಯಾರ ಕಣ್ತುಂಬಿಕೊಳ್ಳುವ ಕಾತರ ಎಲ್ಲರ ಮನದಲ್ಲಿ ಈಗ ಜೋರಾಗಿದೆ. ನಾಡಹಬ್ಬದ ಪ್ರಧಾನ ಆಕರ್ಷಣೆ ವಿಶ್ವಪ್ರಸಿದ್ಧ ಜಂಬೂಸವಾರಿಯಾಗಿದ್ದು ನಾಳೆ ಈ ಉತ್ಸವ ನಡೆಯಲಿದೆ.
ಈ ವೈಭವಕ್ಕಾಗಿ ಮಳೆ ನಡುವೆಯೇ ಸಾಂಸ್ಕೃತಿಕ ನಗರಿಯಲ್ಲಿ ಭರದ ಸಿದ್ಧತೆಗಳು ನಡೆಯುತ್ತಿವೆ. 12 ಆನೆಗಳ ಜೊತೆಗೆ ಅಶ್ವದಳ, ಪೊಲೀಸ್, ವಾದ್ಯವೃಂದ, ಕಲಾತಂಡಗಳು, 43 ಸ್ತಬ್ಧಚಿತ್ರಗಳು ಸಾಗಲಿವೆ. 30 ಜಿಲ್ಲೆಗಳಿಂದ ವೈವಿಧ್ಯಮಯ ಪರಿಕಲ್ಪನೆಗಳಲ್ಲಿ ಸ್ತಬ್ಧಚಿತ್ರ ಮೂಡಿಬರುವುದು ಈಗಾಗ್ಲೇ ನಿರ್ಧಾರವಾಗಿದ್ದು, ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಮೈಸೂರಿಗೆ ಆಗಮಿಸ್ತಾ ಇದ್ದಾರೆ.