Sunday, January 19, 2025
ಕ್ರೀಡೆದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳೂರಿನ ಕುಂಪಲದ ಬಾಡಿಗೆ ಮನೆಯಲ್ಲಿ ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ಮೊಹಮ್ಮದ್‌ ರಝೀನ್‌ ಬಂಧನ – ಕಹಳೆ ನ್ಯೂಸ್

ಮಂಗಳೂರು, ಜ.02 : ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿ ಓರ್ವನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಅನಜೂರು ಗ್ರಾಮದ ಮೊಹಮ್ಮದ್‌ ರಝೀನ್‌(25) ಎಂದು ಗುರುತಿಸಲಾಗಿದೆ.

ಆರೋಪಿ ಅಪ್ರಾಪ್ತೆ ಬಾಲಕಿಯನ್ನು ಪ್ರೀತಿಸುವುದಾಗಿ ಹೇಳಿ ಮಂಗಳೂರಿನ ಪಂಪ್‌ವೆಲ್‌ಗೆ ಬಸ್ಸಿನಲ್ಲಿ ಬರಮಾಡಿಕೊಂಡು ಬಳಿಕ ಆಟೋದಲ್ಲಿ ಕುಂಪಲದ ಬಾಡಿಗೆ ಮನೆಗೆ ಕರೆದುಕೊಂಡು ಹೋಗಿ ಮದುವೆ ಯಾಗುತ್ತೇನೆ ಎಂದು ಹೇಳಿ ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಳ್ಳಾಲ ಪೊಲೀಸ್‌ ರಾಣೆಯಲ್ಲಿ ದೂರು ದಾಖಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಡಿ. 31 ರಂದು 2023ರಂದು ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ.
ಆರೋಪಿಯ ಪತ್ತೆಕಾರ್ಯದಲ್ಲಿ ಮಂಗಳೂರು ದಕ್ಷಿಣ ಉಪ-ವಿಭಾಗದ [ಪೊಲೀಸ್‌ ಆಯುಕ್ತರಾದ ಧನ್ಯ ಎನ್‌ ನಾಯಕ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿ ತನಿಖೆ ಕೈಗೊಳ್ಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು