ಭಾವಲ್ಪುರ ಮಸೀದಿಯಿಂದ ವಾಪಸಾಗುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಗಳು ನಡೆಸಿದ ಬಾಂಬ್ ದಾಳಿಯಲ್ಲಿ ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮಸೂದ್ ಅಜರ್ ಸಾವು..!? – ಕಹಳೆ ನ್ಯೂಸ್
ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮಸೂದ್ ಅಜರ್ (55) ಸಾವನ್ನಪ್ಪಿದ್ದಾನೆ. ?
ಹೌದು ಈ ಕುರಿತು ಸುದ್ದಿ ಹರಿದಾಡುತ್ತಿದ್ದು, ಇಂದು ಬೆಳಗ್ಗೆ ಅಪರಿಚಿತ ದುಷ್ಕರ್ಮಿಗಳು ನಡೆಸಿದ ಬಾಂಬ್ ದಾಳಿಯಲ್ಲಿ ಮಸೂದ್ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.
ಆದರೆ ಈ ಕುರಿತಾಗಿ ಯಾವುದೇ ಅಧಿಕೃತವಾದ ಮಾಹಿತಿ ಕೂಡಾ ಲಭ್ಯವಾಗಿಲ್ಲ.
ಮೊಹಮ್ಮದ್ ಮಸೂದ್ ಅಜರ್ ಅಲ್ವಿ, ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಸ್ಥಾಪಕ. ಸೋಮವಾರ ಬೆಳಗ್ಗೆ ಭಾವಲ್ಪುರ ಮಸೀದಿಯಿಂದ ವಾಪಸಾಗುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಗಳು ಅವರ ಮೇಲೆ ಬಾಂಬ್ ಎಸೆದಿದ್ದಾರೆ ಎಂದು ವರದಿಯಾಗಿದೆ. ಮಸೂದ್ ಅಜರ್ ಸಾವಿನ ಕುರಿತು ಅಧಿಕೃತ ಘೋಷಣೆ ಇನ್ನಷ್ಟೇ ಹೊರಬೀಳಬೇಕಿದೆ. ಆದರೆ ಖಾಸಗಿ ವಾಹಿನಿ ಈ ಕುರಿತಾಗಿ ಕೆಲವು ಫೋಟೋಗಳನ್ನು ಶೇರ್ ಮಾಡಿ ಮಸೂದ್ ಅಜರ್ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದೆ. ಆದರೆ ಈ ಕುರಿತಾಗಿ ಅಧಿಕೃತ ಮಾಹಿತಿ ಹೊರ ಬರಬೇಕಿದೆ.
2001 ರ ಭಾರತೀಯ ಸಂಸತ್ತಿನ ಮೇಲಿನ ದಾಳಿ, 2008 ರ ಮುಂಬೈ ದಾಳಿ, 2016 ರ ಪಠಾಣ್ ಕೋಟ್ ದಾಳಿ ಮತ್ತು 2019 ರ ಪುಲ್ವಾಮಾ ದಾಳಿಗಳಿಗೆ ಕಾರಣವಾದ ಜೈಶ್-ಎ-ಮೊಹಮ್ಮದ್ ಅನ್ನು ಅಜಹರ ಸ್ಥಾಪಿಸಿದ್ದನು.
ಮೇ 1, 2019 ರಂದು, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಅವನನ್ನು ಅಂತಾರಾಷ್ಟ್ರೀಯ ಭಯೋತ್ಪಾದಕ ಎಂದು ಘೋಷಿಸಿತು.