Tuesday, April 8, 2025
ಅಂತಾರಾಷ್ಟ್ರೀಯಕ್ರೈಮ್ರಾಷ್ಟ್ರೀಯಸುದ್ದಿ

ಯುವತಿಯೊಬ್ಬಳನ್ನು ಟೀಚರ್ ಕೆಲಸಕ್ಕೆಂದು ಕರೆದೊಯ್ದು ನಿರಂತರ ಅತ್ಯಾಚಾರ ನಡೆಸಿ ಜೈಲು ಪಾಲಾಗಿರು ಅತ್ಯಾಚಾರಿ ಆರೋಪಿ ಮೌಲ್ವಿ, ನಕಲಿ ದಾಖಲೆ ಸೃಷ್ಠಿಸಿ ಭಾರತ ಸೇರಿದ್ದ…!! ; ಸ್ಫೋಟಕ ಸತ್ಯ ಬಯಲು – ಕಹಳೆ ನ್ಯೂಸ್

ಹುಬ್ಬಳ್ಳಿ/ಧಾರವಾಡ: ಯುವತಿಯೊಬ್ಬಳನ್ನು ಟೀಚರ್ ಕೆಲಸಕ್ಕೆಂದು ಕರೆದೊಯ್ದು ನಿರಂತರ ಅತ್ಯಾಚಾರ ನಡೆಸಿ ಜೈಲು ಪಾಲಾಗಿರುವ ಮೌಲ್ವಿ ಪ್ರಕರಣದಲ್ಲಿ ಸ್ಫೋಟಕ ಸತ್ಯವೊಂದು ಹೊರ ಬಿದ್ದಿದೆ. ಆರೋಪಿ ಗುಲಾಮ ಜಿಲಾನಿ ಅಜಹರಿ ಅಸಲಿಗೆ ಭಾರತೀಯನೇ ಅಲ್ಲ ಎಂದು ತಿಳಿದು ಬಂದಿದ್ದು, ನಕಲಿ ದಾಖಲೆಗಳನ್ನು ಸೃಷ್ಠಿಸಿಕೊಂಡು ದೇಶದಲ್ಲಿ ನೆಲೆಸಿದ್ದ ಎಂದು ಪೊಲೀಸರ (Police) ತನಿಖೆ ವೇಳೆ ತಿಳಿದು ಬಂದಿದೆ.

ನೇಪಾಳ ಪೌರತ್ವ ಹೊಂದಿರುವ ಆರೋಪಿ, ಮಧ್ಯಪ್ರದೇಶದ (Madhya Pradesh) ಖಂಡವಾಗೆ ಆರು ವರ್ಷಗಳ ಹಿಂದೆ ಬಂದು ನೆಲೆಸಿದ್ದ. ಇಲ್ಲಿಗೆ ಬಂದ ಮೇಲೆ ನಕಲಿ ಆಧಾರ್ ಕಾರ್ಡ್, ಪಾನ್ ಕಾರ್ಡ್ ಹಾಗೂ ಮತದಾರರ ಚೀಟಿ ಮಾಡಿಸಿಕೊಂಡಿದ್ದಾನೆ. ಅಲ್ಲಿಯೇ ಮದರಸಾವನ್ನು ಸಹ ಕಟ್ಟಿಕೊಂಡಿದ್ದ. ಭಾರತದ ಅನೇಕ ರಾಜ್ಯಗಳಲ್ಲಿ ಓಡಾಡಿಕೊಂಡಿದ್ದ ಈತ ಧಾರ್ಮಿಕ ಪ್ರವಚನ ನೀಡಿ ಜನಮನ್ನಣೆ ಗಳಿಸಿದ್ದ. ಅಲ್ಲದೇ ಭಾರತದ ಹೆಸರಾಂತ ಧಾರ್ಮಿಕ ಪ್ರವಚನಕಾರರ ವಿರುದ್ಧ ಹೇಳಿಕೆ ಕೊಡುತ್ತಿದ್ದ.

ಜಾಹೀರಾತು
ಜಾಹೀರಾತು
ಜಾಹೀರಾತು

ಆರೋಪಿಗೆ ನೇಪಾಳದಲ್ಲಿ ಶೇರ್ ಎ ನೇಪಾಳ ಎಂದು ಕರೆಯಲಾಗುತ್ತಿತ್ತು. ಈಗಾಗಲೇ ಎರಡು ಮದುವೆಯಾಗಿದ್ದ ಆರೋಪಿ, ಮೊದಲನೇ ಪತ್ನಿ ನೇಪಾಳದವಳಾಗಿದ್ದು, ಆಕೆಗೆ ಡಿವೋರ್ಸ್ ನೀಡಿದ್ದ. ಬಳಿಕ ಭಾರತಕ್ಕೆ ಬಂದು ನೆಲೆಸಿದ್ದ. ನೇಪಾಳದಲ್ಲಿ ಈತನ ಕುಟುಂಬವಿದ್ದು, ಅಲ್ಲಿಗೆ ಆಗಾಗ ಹೋಗಿ ಬರುತ್ತಿದ್ದ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆರೋಪಿಯ ವಿರುದ್ಧ, ಯುವತಿಯೊಬ್ಬಳು, ಮತ್ತು ಬರುವ ಔಷಧಿ ನೀಡಿ ಅತ್ಯಾಚಾರ ಮಾಡಿದ್ದಾನೆ ಎಂದು ಆರೋಪಿಸಿದ್ದಾಳೆ. ಮೌಲ್ವಿ ಮದುವೆ ಮಾಡಿಕೊಳ್ಳುವುದಾಗಿ ಹೇಳಿ ಎರಡು ವರ್ಷಗಳ ಕಾಲ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ. ಅಲ್ಲದೇ ಗುಲಾಮ ಜಿಲಾನಿ ಅಜಹರಿ, ಒಟ್ಟು ನಾಲ್ಕು ಬಾರಿ ಆಕೆಗೆ ಗರ್ಭಪಾತ ಮಾಡಿಸಿದ್ದಾನೆ ಎನ್ನಲಾಗಿದೆ. ಆಕೆ ಮತ್ತೆ ಐದನೇ ಬಾರಿಗೆ ಗರ್ಭಿಣಿಯಾದ ಬಳಿಕ ಆಕೆಯನ್ನು ಹುಬ್ಬಳ್ಳಿಯಲ್ಲಿರುವ ಯುವತಿಯ ಮನೆಯಲ್ಲಿ ಬಿಟ್ಟು, ನನ್ನ ನಿನ್ನ ನಡುವೆ ಯಾವ ಸಂಬಂಧ ಉಳಿದಿಲ್ಲ. ಈ ವಿಷಯ ಬಹಿರಂಗಪಡಿಸಿದರೆ ನಿನ್ನನ್ನು ಮತ್ತು ನಿನ್ನ ಕುಟುಂಬವನ್ನು ಸುಮ್ಮನೇ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಹಳೆ ಹುಬ್ಬಳ್ಳಿ (Hubballi) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇತ್ತೀಚೆಗೆ ಮಧ್ಯಪ್ರದೇಶಕ್ಕೆ ತೆರಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ