Wednesday, January 22, 2025
ಸುದ್ದಿ

ಕಾಪು: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ : ಶಾಸಕ ಗುರ್ಮೆ ಸುರೇಶ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಕಾಪು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಕಾಪು ತಾಲೂಕು, ಉಡುಪಿ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳು ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪಡುಬೆಳ್ಳೆ ಶಿರ್ವ ವಲಯದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ಶಿರ್ವ ಪೂಜ್ಯ ಡಾ॥ ಡಿ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ಅಮ್ಮನವರ ಕೃಪಾಶೀರ್ವಾದಗಳೊಂದಿಗೆ ಇಂದು ಪಡುಬೆಳ್ಳೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆಯೋಜಿಸಲಾದ “ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಮತ್ತು ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ”ದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷರಾದ ಹರೀಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರೀಯ ವಿಶ್ವಾಸ್ಥಾ ಮಂಡಳಿ ಸದಸ್ಯರು ಪ್ರೇಮಾನಂದ ಶೆಟ್ಟಿ ಕಟ್ಕೆರೆ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಕರಾವಳಿ ಪ್ರಾದೇಶಿಕ ವಿಭಾಗದ ಆಡಳಿತ ಯೋಜನಾಧಿಕಾರಿಗಳಾದ ಪುರಂದರ ಪೂಜಾರಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಿ. ಕಾಪು ತಾಲೂಕು ಯೋಜನಾಧಿಕಾರಿಗಳಾದ ಜಯಂತಿ, ಬೆಳ್ಳೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿವ್ಯ ಆಚಾರ್ಯ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಶಿರ್ವ ವಲಯ ಅಧ್ಯಕ್ಷರಾದ ರಾಘವೇಂದ್ರ ಶೆಟ್ಟಿ ಉಪಸ್ಥಿತರಿದ್ದರು.