Thursday, January 23, 2025
ಸುದ್ದಿ

ಕೋಳಿ ಫಾರಂನಲ್ಲಿ ಮಾಂಸದ ಕೋಳಿ ತುಂಬುವಾಗ ಮೋಸ : ಮೋಸಗಾರನ್ನ ಮರಕ್ಕೆ ಕಟ್ಟಿ ಹಾಕಿದ ರೈತ – ಕಹಳೆ ನ್ಯೂಸ್

ಮಂಡ್ಯ: ಕೋಳಿ ಫಾರಂನಲ್ಲಿ ಮಾಂಸದ ಕೋಳಿ ತುಂಬುವಾಗ ಮೋಸ ಮಾಡಲು ಯತ್ನಿಸಿದವರನ್ನು ರೈತ ಮರಕ್ಕೆ ಕಟ್ಟಿ ಹಾಕಿದ ಘಟನೆ ಪಾಂಡವಪುರ ತಾಲೂಕಿನ ಚಿಕ್ಕಬ್ಯಾಡರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರೈತ ಹನುಮಂತೇಗೌಡಗೆ ಸೇರಿದ ಕೋಳಿಫಾರಂನಲ್ಲಿ ವಂಚನೆ ನಡೆದಿದ್ದು, ಹನುಂತೇಗೌಡ ತಮ್ಮ ಕೋಳಿ ಫಾರಂನಲ್ಲಿ ಸಾಕು ಕೋಳಿಗಳನ್ನು ಖಾಸಗಿಯವರಿಗೆ ಮಾರಾಟ ಮಾಡುತ್ತಿದ್ದರು. ಮೈಸೂರು ಮೂಲದ ಎನ್.ಆರ್ ಚಿಕನ್ ಕಂಪನಿ ಕೋಳಿ ಖರೀದಿಸಲು ಬರುತ್ತಿತ್ತು. ವಂಚಕರು ಕಳೆದ ಮೂರ್ನಾಲ್ಕು ತಿಂಗಳಿಂದ ಈ ರೈತನಿಗೆ ಕೋಳಿ ತುಂಬುವಾಗ ತೂಕದಲ್ಲಿ ಮೋಸ ಮಾಡ್ತಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು ಅನುಮಾನಗೊಂಡ ರೈತ ಬೇರೆ ತೂಕದ ಯಂತ್ರ ತರಿಸಿ ತೂಕ ಹಾಕಿಸಿದಾಗ ವಂಚನೆ ಬೆಳಕಿಗೆ ಬಂದಿದೆ. ಈ ವೇಳೆ ಒಂದು ತೂಕದಲ್ಲಿ ರೈತನಿಗೆ ಸುಮಾರು 30 ಕೆಜಿ ವ್ಯತ್ಯಾಸ ಕಂಡು ಬಂದಿದೆ. ಇದರಿಂದ ರೊಚ್ಚಿಗೆದ್ದ ರೈತ ಹನುಮಂತೇಗೌಡ ಕೋಳಿ ತುಂಬಲು ಬಂದಿದ್ದ ನಾಲ್ವರಲ್ಲಿ ಇಬ್ಬರನ್ನು ಹಿಡಿದು ಮರಕ್ಕೆ ಕಟ್ಟಿದ್ದಾರೆ.

ತೂಕದಲ್ಲಿ ಮೋಸ ಮಾಡಿ ಇದುವರೆಗೂ ವಂಚಿಸಿದವರ ವಿರುದ್ದ ಪೆÇಲೀಸರಿಗೆ ದೂರು ನೀಡಲಾಗಿದೆ. ಪಾಂಡವಪುರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.