Thursday, January 23, 2025
ಸುದ್ದಿ

ನಿಯಂತ್ರಣ ತಪ್ಪಿ ಉರುಳಿ ಬಿದ್ದ ಶಾಲಾ ಬಸ್ : ವಿದ್ಯಾರ್ಥಿಗಳಿಗೆ ಗಾಯ – ಕಹಳೆ ನ್ಯೂಸ್

ನಿಯಂತ್ರಣ ತಪ್ಪಿ ಶಾಲಾ ಬಸ್ ಉರುಳಿ ಬಿದ್ದು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಚನ್ನಸಮುದ್ರ ಗ್ರಾಮದ ಬಳಿ ನಡೆದಿದೆ.

ಹೊಸದುರ್ಗ ತಾಲೂಕಿನ ಚನ್ನಸಮುದ್ರ ಹಾಗೂ ಮಲ್ಲಪ್ಪನಹಳ್ಳಿ ಗ್ರಾಮಗಳ ಬಳಿ ಈ ಬಸ್ ಪಲ್ಟಿಯಾಗಿದ್ದು, ಹೊಸದುರ್ಗ ತಾಲೂಕಿನ ಮಲ್ಲಪ್ಪನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಸ್ ಮಕ್ಕಳನ್ನ ಶಾಲೆಗೆ ಕರೆದುಕೊಂಡು ಹೋಗುವಾಗ ಈ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಸ್ತೆಯಲ್ಲಿ ಪೈಪ್ ನ ಕಾಮಗಾರಿಗಾಗಿ ನಡೆಯುತ್ತಿದ್ದ ಗುಂಡಿ ತೆಗೆದು ಸರಿಯಾಗಿ ಮುಚ್ಚದೆ ಹಾಗೆ ಬಿಟ್ಟಿದ್ದರು. ಈ ಗುಂಡಿಯನ್ನು ತಪ್ಪಿಸಲು ಹೋದಾಗ ನಿಯಂತ್ರಣ ತಪ್ಪಿದ ಶಾಲಾ ಬಸ್ ಪಕ್ಕಕ್ಕೆ ಉರುಳಿ ಬಿದ್ದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಸ್ಸಿನಲ್ಲಿ ಸುಮಾರು 15-20 ಮಕ್ಕಳಿದ್ದು ಕೆಲವರಿಗೆ ಸಣ್ಣ ಪುಟ್ಟ ತರಚಿದ ಗಾಯಗಳಾಗಿದ್ದು ಅದೃಷ್ಟವಶಾತ್ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಗೊಂಡ ಮಕ್ಕಳನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಹೊಸದುರ್ಗ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.