Wednesday, January 22, 2025
ಉಡುಪಿಬೆಂಗಳೂರುರಾಜಕೀಯರಾಜ್ಯಸುದ್ದಿ

ನಾನು ಕರಸೇವಕ ನನ್ನನ್ನೂ ಬಂಧಿಸಿ : ಪ್ರತಿಭಟನೆಗಿಳಿದ ಶಾಸಕ ವಿ.ಸುನಿಲ್ ಕುಮಾರ್ ಪೊಲೀಸರ ವಶಕ್ಕೆ – ಕಹಳೆ ನ್ಯೂಸ್

ಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ’ ಎಂದು ಆಗ್ರಹಿಸಿ ಧರಣಿ ಕುಳಿತ ಶಾಸಕ ವಿ.ಸುನಿಲ್ ಕುಮಾರ್ ಅವರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು: ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ’ ಎಂದು ಆಗ್ರಹಿಸಿ ಧರಣಿ ಕುಳಿತ ಶಾಸಕ ವಿ.ಸುನಿಲ್ ಕುಮಾರ್ ಅವರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ.
ಇಂದು ಬೆಳಗ್ಗೆ ನಗರದ ಸದಾಶಿವನಗರ ಪೊಲೀಸ್ ಠಾಣೆ ಎದುರು ಸುನೀಲ್ ಕುಮಾರ್ ಅವರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ವಶಕ್ಕೆ ಪಡೆದುಕೊಂಡರು. ಪ್ರತಿಭಟನೆ ವೇಳೆ ಸುನೀಲ್ ಕುಮಾರ್ ಅವರು ‘ನನ್ನನ್ನೂ ಬಂಧಿಸಿ’ ಎಂಬ ಬರಹವುಳ್ಳ ಕರಪತ್ರವನ್ನು ಹಿಡಿದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. 31 ವರ್ಷದ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಎಂಬುವವರನ್ನು ಬಂಧನ ಮಾಡಲಾಗಿದೆ. ಇವರ ವಿರುದ್ಧ ಗಲಭೆ ದೊಂಬಿ, ಅಬಕಾರಿ ಕೇಸ್, ಜೂಜಾಟ ಪ್ರಕರಣಗಳು ಇವೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. ಆದರೆ ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯ ಸಂದರ್ಭದಲ್ಲಿ ಇವರ ಬಂಧನ ಏಕೆ ಎಂದು ಬಿಜೆಪಿ ಪ್ರಶ್ನಿಸುತ್ತಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು