Recent Posts

Monday, January 20, 2025
ಸುದ್ದಿ

ಮಂಗಳೂರು : ಬೇರೊಬ್ಬಳಿಗೆ ತಾಳಿ ಕಟ್ಟುವಾಗ ಎಂಟ್ರಿ ಕೊಟ್ಟ ಮಾಜಿ ಪ್ರೇಯಸಿ : ಕಕ್ಕಾಬಿಕ್ಕಿಯಾದ ವರ – ಕಹಳೆ ನ್ಯೂಸ್

ಮಂಗಳೂರು : ಮಾಜಿ ಪ್ರೇಯಸಿಯೊಬ್ಬಳು ತನಗೆ ಮೋಸ ಮಾಡಿ ಬೇರೊಬ್ಬಳೊಂದಿಗೆ ಮದುವೆಯಾಗುತ್ತಿರುವ ವರನನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಉಳ್ಳಾಲ ತಾಲೂಕಿನ ಬೀರಿಯಲ್ಲಿ ನಡೆದಿದೆ.

ಕೇರಳ ಮೂಲದ ಅಕ್ಷಯ್ ಎಂಬಾತನ ಮದುವೆ ಮಂಗಳೂರು ಮೂಲದ ಯುವತಿ ಜೊತೆ ಮದುವೆ ನಡೆಯುತ್ತಿದ್ದಾಗ ಮೈಸೂರು ಮೂಲದ ಮಾಜಿ ಪ್ರೇಯಸಿ ಕಲ್ಯಾಣ ಮಂಟಪಕ್ಕೆ ಎಂಟ್ರಿಕೊಟ್ಟು ಹೈಡ್ರಾಮ ನಡೆಸಿದ್ದಾಳೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೇರಳದ ಕೊಝಿಕ್ಕೋಡ್ ಮೂಲದ ಅಕ್ಷಯ್ ಒಂದೂವರೆ ವರ್ಷದ ಹಿಂದೆ ಮೈಸೂರಿನ ಯುವತಿಯನ್ನು ಶಾದಿ ಡಾಟ್ ಕಾಮ್ ಮೂಲಕ ಪರಿಚಯ ಮಾಡಿಕೊಂಡಿದ್ದನು. ನಂತರ ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆ. ನಂತರ ವರಸೆ ಬದಲಾಯಿಸಿದ್ದಾನೆ. ಡಿಸೆಂಬರ್ 26 ರಂದು ಯುವತಿ ಅಕ್ಷಯ್ ವಿರುದ್ಧ ಕೇರಳದ ಪೆÇಲೀಸ್ ಠಾಣೆಯಲ್ಲಿ ಅತ್ಯಾಚಾರದ ದೂರು ದಾಖಲಿಸಿದ್ದಾಳೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಕರಣ ಸಂಬಂಧ ಆರೋಪಿ ಅಕ್ಷಯ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿತ್ತು. ಈ ನಡುವೆ ಮಂಗಳೂರಿನ ಯುವತಿ ಜೊತೆ ಅಕ್ಷಯ್‍ಗೆ ವಿವಾಹ ನಿಶ್ಚಯವಾಗಿದೆ. ಕರ್ನಾಟಕದ-ಕೇರಳ ಗಡಿಭಾಗ ಬೀರಿಯ ಖಾಸಗಿ ಹಾಲ್‍ನಲ್ಲಿ ಮದುವೆ ನಡೆಯುತ್ತಿರುವ ವಿಚಾರ ತಿಳಿದು ಉಳ್ಳಾಲ ಪೆÇಲೀಸರೊಂದಿಗೆ ಆಗಮಿಸಿ ಹಾಲ್ ಮುಂಭಾಗದಲ್ಲಿ ಹೈಡ್ರಾಮ ನಡೆಸಿದ್ದಾಳೆ.

ನಂತರ ಪೆÇಲೀಸರೇ ಆಕೆಯನ್ನು ಹಾಲ್ ಬಳಿಯಿಂದ ಕೇರಳದ ಮಂಜೇಶ್ವರ ಪೆÇಲೀಸ್ ಠಾಣೆಗೆ ಕರೆದುಕೊಂಡು ಹೋದರು. ಆರೋಪಿಯನ್ನು ಅರೆಸ್ಟ್ ಮಾಡಿ ಅಂದರೆ ನನ್ನನ್ನೇ ಕರೆದುಕೊಂಡು ಹೋಗುತ್ತಿದ್ದಾರೆ ಎಂದು ಯುವತಿ ಆಕ್ರೋಶ ಹೊರಹಾಕಿದ್ದಾಳೆ. ನಂತರ ಅಕ್ಷಯ್ ಮಂಗಳೂರು ಯುವತಿಗೆ ತಾಳಿ ಕಟ್ಟಿದ್ದಾನೆ ಎಂದು ವರದಿಯಾಗಿದೆ.