Tuesday, January 21, 2025
ಸುದ್ದಿ

ವಿರೋಧ ಪಕ್ಷದ ನಾಯಕರಿಗೆ ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದನೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಅವರೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು  ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಉಡುಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ಮಾಜಿ ಸಚಿವರಾದ ಬೈರತ್ತಿ ಬಸವರಾಜ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ಜಿಲ್ಲಾ ಕಾರ್ಯಾಲಯ ಪ್ರಧಾನ ಕಾರ್ಯದರ್ಶಿಗಳಾದ ಸತ್ಯಾನಂದ ನಾಯಕ್ ಉಪಸ್ಥಿತರಿದ್ದರು.