Sunday, November 24, 2024
ಸುದ್ದಿ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಪದ ಬಳಕೆ : ಮಾಲ್ಡೀವ್ಸ್ ಸರ್ಕಾರದ ಮೂವರು ಸಚಿವರ ಅಮಾನತು –ಕಹಳೆ ನ್ಯೂಸ್

ಇತ್ತೀಚೆಗೆ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದ ಮೋದಿ ಅವರು ಅಲ್ಲಿನ ಕಳೆದ ಕ್ಷಣಗಳ ವಿಡಿಯೊ ಮತ್ತು ಫೋಟೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ಈ ಭೇಟಿಯ ಕುರಿತಂತೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದ ಮಲ್ಯಾ ಷರೀಫ್, ಮರಿಯಮ್ ಶಿಯುನಾ ಮತ್ತು ಮಹಜೂಮ್ ಮಜೀದ್‌ ಅವರು ಪ್ರಧಾನಿ ಮೋದಿ ಮತ್ತು ಭಾರತವನ್ನು ಟೀಕಿಸಿದ್ದರು. ಸಚಿವರ ಹೇಳಿಕೆ ಕುರಿತು ಆಕ್ರೋಶ ಭುಗಿಲೆದ್ದ ಬೆನ್ನಲ್ಲೇ ಸಚಿವರನ್ನು ಅಮಾನತುಗೊಳಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ಸಚಿವರ ಹೇಳಿಕೆಗಳು ವೈಯಕ್ತಿಕ ಅಭಿಪ್ರಾಯವಾಗಿದೆ. ಅವು ಮಾಲ್ಮೀಮ್ಸ್ ರ‍್ಕಾರವನ್ನು ಪ್ರತಿನಿಧಿಸುವುದಿಲ್ಲ ಎಂದು ಮಾಲ್ಮೀಮ್ಸ್ ವಿದೇಶಾಂಗ ಸಚಿವಾಲಯ ತಿಳಿಸಿದೆ.

ಅಭಿವ್ಯಕ್ತಿ ಸ್ವಾತಂತ್ರ‍್ಯವನ್ನು ಪ್ರಜಾಸತ್ತಾತ್ಮಕ ಮತ್ತು ಜವಾಬ್ದಾರಿಯುತ ರೀತಿಯಲ್ಲಿ ಬಳಸಬೇಕಿದೆ. ದ್ವೇಷ, ನಕಾರಾತ್ಮಕತೆಯನ್ನು ಹರಡುವುದು ಸರಿಯಲ್ಲ. ಮಾಲ್ಮೀಮ್ಸ್ ಮತ್ತು ಅದರ ಅಂತರರಾಷ್ಟ್ರೀಯ ಪಾಲುದಾರ ರಾಷ್ಟ್ರಗಳ ನಡುವಿನ ನಿಕಟ ಸಂಬಂಧಗಳಿಗೆ ಅಡ್ಡಿಯಾಗುವ ರೀತಿಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ‍್ಯವನ್ನು ಬಳಸುವುದು ಸೂಕ್ತವಲ್ಲ ಎಂದು ಮಾಲ್ಮೀಮ್ಸ್ ವಿದೇಶಾಂಗ ಸಚಿವಾಲಯ ಹೇಳಿದೆ.