ಕುಕ್ಕೆಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪಿ.ಎಂ ಶ್ರೀ ಯೋಜನೆ ಅಡಿ ಮಂಜೂರಾದ ಪೂರ್ವ ಪ್ರಾಥಮಿಕ ತರಗತಿ (LKG)ಯನ್ನು ಇಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕುಕ್ಕೆಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪುರಂದರ ಕೋಟ್ಯಾನ್, ಉಪಾಧ್ಯಕ್ಷರಾದ ಜಯಶ್ರೀ, ಗ್ರಾಮ ಪಂಚಾಯತ್ ಸದಸ್ಯರಾದ ಶಂಕರ್ ಸಾಲಿಯಾನ್, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ದೇವೇಂದ್ರ ಕುಲಾಲ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ರಾಘವೇಂದ್ರ ಪ್ರಭು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರಸಾದ್ ಹೆಗ್ಡೆ, ಕುಕ್ಕೆಹಳ್ಳಿ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಶಾಂತ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷರಾದ ಶಶಿಕಲಾ, ಸದಸ್ಯರಾದ ಜ್ಯೋತಿ, ಮುಖ್ಯ ಶಿಕ್ಷಕರಾದ ಸರಸ್ವತಿ ಉಪಸ್ಥಿತರಿದ್ದರು.