Sunday, November 24, 2024
ಸುದ್ದಿ

ಹೆಜಮಾಡಿ ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ – ಕಹಳೆ ನ್ಯೂಸ್

ಹೆಜಮಾಡಿ ಗ್ರಾಮ ಪಂಚಾಯತ್ ನಲ್ಲಿ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯೊಂದಿಗೆ ಭಾರತದಾದ್ಯಂತ ನವೆಂಬರ್ 15 ರಿಂದ ಜನವರಿ 26ರವರೆಗೆ ನಡೆಯುತ್ತಿರುವ “ವಿಕಸಿತ ಭಾರತ ಸಂಕಲ್ಪ ಯಾತ್ರೆ”ಗೆ   ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ದೀನ್ ದಯಾಳ್ ಅಂತ್ಯೋದಯ ಯೋಜನೆ ಅಡಿ ಶ್ರೀಮದ್ ಭಾರತ ಮಂಡಳಿ ಸಂಜೀವಿನಿ ಸ್ವಸಾಯ ಸಂಘಕ್ಕೆ 1.5 ಲಕ್ಷ ಸಹಾಯಧನ ವಿತರಣೆ ಮಾಡಲಾಯಿತು.  ಕೇಂದ್ರ ಸರ್ಕಾರದ 70ಕ್ಕೂ ಹೆಚ್ಚು ಯೋಜನೆಗಳ ಪೈಕಿ 17 ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿಯನ್ನು ಒದಗಿಸುವುದು, ಈ ಯೋಜನೆಗಳನ್ನು ಕೊನೆಯ ಮೈಲಿಯವರೆಗೂ ಮುಟ್ಟಿಸುವುದು, ಈವರೆಗೆ ಪ್ರಯೋಜನ ಪಡೆಯದ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆಗಳನ್ನು ತಲುಪಿಸುವುದು ಈ ಯಾತ್ರೆಯ ಉದ್ದೇಶವಾಗಿದ್ದು, ಯಾತ್ರೆಯಲ್ಲಿ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ವಾಹನ ಉಡುಪಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದ್ದು, ಎಲ್ಇಡಿ ಪರದೆಯ ಮೂಲಕ ಯೋಜನೆಗಳ ಮಾಹಿತಿಯನ್ನು ನೀಡಲಾಗುವುದು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿ, ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಶ್ಮಿ, ಉಪಾಧ್ಯಕ್ಷರಾದ ಮೋಹನ್ ಸುವರ್ಣ, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ, ಜಿಲ್ಲಾ ಲೀಡ್ ಬ್ಯಾಂಕ್ ಪ್ರಬಂಧಕರಾದ ಬೀರ್ ಸಾಬ್ ಪಿಂಚಾರ, ಹೆಜಮಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಇನಾಯತ್, ವಿಕಸಿತ ಭಾರತ ಸಂಕಲ್ಪ ಯಾತ್ರೆ ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು