Friday, January 24, 2025
ಸುದ್ದಿ

ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಅನೈತಿಕ ಪೊಲೀಸ್ ಗಿರಿ : ಚಾಕಲೇಟ್‌ ನೀಡಿದ ಯುವಕನಿಗೆ ಹಲ್ಲೆ – ಕಹಳೆ ನ್ಯೂಸ್

ಮಂಗಳೂರು : ಮೂಡಿಗೆರೆ ಪಟ್ಟಣದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಯುವಕನೋರ್ವನ ಮೇಲೆ ನಡೆದ ಅನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿ ಮೂಡಿಗೆರೆ ಠಾಣೆಯಲ್ಲಿ ಪ್ರತ್ಯೇಕ ಎರಡು ಪ್ರಕರಣಗಳು ದಾಖಲಾಗಿವೆ.

ಈ ಸಂಬಂಧ ಜಿಲ್ಲಾ ಪೋಲಿಸ್ ಇಲಾಖೆ ಮಾಹಿತಿ ನೀಡಿದ್ದು, ಐಪಿಸಿ ಸೆಕ್ಷನ್ 143, 144, 148, 323, 324, 504, 506, 149ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದೆ. ಇಲ್ಲಿನ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬಳಿಗೆ ಯುವಕನೋರ್ವ ಚಾಕಲೇಟ್ ನೀಡಿದ್ದನ್ನು ಆಕ್ಷೇಪಿಸಿ ಕಾರಿನಲ್ಲಿ ಬಂದ ತಂಡವೊಂದು ಯುವಕನ ಮೇಲೆ ಯದ್ವಾತದ್ವಾ ಹಲ್ಲೆ ನಡೆಸಿತ್ತು. ಇದರ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಹಲ್ಲೆಗೆ ಸಂಬಂಧಿಸಿ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು