Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿಸುಬ್ರಹ್ಮಣ್ಯ

ನಿರಂತರ ವಾಹನಗಳು ಸಂಚರಿಸುವ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆಯಲ್ಲಿ ದಿಢೀರ್ ಕಾಣಿಸಿಕೊಂಡು ಕಾಡಾನೆ ; ವಾಹನ ಚಾಲಕರಲ್ಲಿ ಆತಂಕ – ಕಹಳೆ ನ್ಯೂಸ್

ಪ್ಪಿನಂಗಡಿ: ನಿರಂತರ ವಾಹನಗಳು ಸಂಚರಿಸುವ ಹೆದ್ದಾರಿಯಲ್ಲಿ ಕಾಡಾನೆಯೊಂದು ಕಾಣಿಸಿಕೊಂಡು ವಾಹನ ಚಾಲಕರಲ್ಲಿ ಆತಂಕ ಸೃಷ್ಟಿಸಿದ ಘಟನೆ  ಶಿರಾಡಿ ಗ್ರಾಮದ ಉದನೆಯಲ್ಲಿ ಸಂಭವಿಸಿದೆ.

ಶಿರಾಡಿ ಪರಿಸರದಲ್ಲಿ ವಾಹನದ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಇನ್ನೂ ಮರೆಯಾಗುವ ಮೊದಲೇ ಉದನೆ ಪೇಟೆ ಸಮೀಪ ಗುಂಡ್ಯ ಹೊಳೆಬದಿಯಿಂದ ಬಂದ ಆನೆಯು ಯಾವುದೇ ತೊಂದರೆ ಮಾಡದೆ ರಾಷ್ಟ್ರೀಯ ಹೆದ್ದಾರಿ ದಾಟಿ ಅರಣ್ಯ ಪ್ರದೇಶಕ್ಕೆ ತೆರಳಿದ ಕಾರಣ ವಾಹನ ಸವಾರರು ನಿಟ್ಟುಸಿರು ಬಿಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ ಕೆಲವು ದಿನಗಳಿಂದ ಶಿರಾಡಿ ಗ್ರಾಮದ ವಿವಿಧ ಕಡೆಗಳಲ್ಲಿ ಕಾಡಾನೆಗಳು ಜನರಿಗೆ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದು ತೋಟಗಳಿಗೆ ನುಗ್ಗಿ ಬಾಳೆ, ಅಡಿಕೆ, ತೆಂಗು ಸೇರಿದಂತೆ ಇತರೇ ಕೃಷಿ ಬೆಳೆಗಳನ್ನು ಹಾನಿಗೊಳಿಸುತ್ತಿರುವ ಬಗ್ಗೆ ಅರಣ್ಯ ಇಲಾಖೆಗೆ ದೂರು ಸಲ್ಲಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು