ಬಂಟ್ವಾಳದ ವಗ್ಗ ಅಂಚಿಕಟ್ಟೆಯಲ್ಲಿ ಬೆಳಂಬೆಳಿಗ್ಗೆ ತಾಯಿ, ಮಗಳಿಗೆ ಚಾಕು ತೋರಿಸಿ ನಗನಗದು ದೋಚಿದ ಮುಸುಕುಧಾರಿಗಳು ; ಸ್ಥಳಕ್ಕೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ರಿಷ್ಯಂತ್..!- ಕಹಳೆ ನ್ಯೂಸ್
ಮನೆಯಲ್ಲಿ ತಾಯಿ ಪ್ಲೋರಿನಾ ಪಿಂಟೊ ಮಗಳು ಮರಿನಾ ಪಿಂಟೋ ಇಬ್ಬರು ಮಾತ್ರ ಇದ್ದು ಗಂಡಸರಿಲ್ಲದ ಮನೆಯಿಂದ ದರೋಡೆ ನಡೆಸಲಾಗಿದೆ.
ಗೊದ್ರೇಜ್ ನಲ್ಲಿರಿಸಲಾಗಿದ್ದ ಸುಮಾರು 2.90 ಲಕ್ಷ ರೂಮೌಲ್ಯದ ವಿವಿಧ ಚಿನ್ನಾಭರಣಗಳು, 30 ಸಾವಿರ ನಗದು ಹಾಗೂ ಒಂದು ಮೊಬೈಲ್ ಪೋನ್ ಒಟ್ಟು ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ನಗನಗದು ದೋಚಿದ್ದಾರೆ.
ಇಂದು ಬೆಳಿಗ್ಗೆ ಸುಮಾರು 6.30 ರ ಸಮಯದಲ್ಲಿ ಬೆಲ್ ಹಾಕಿದಾಗ ಬಾಗಿಲು ತೆಗದು ನೋಡಿದಾಗ ನಾಲ್ವರು ಮುಸುಕುದಾರಿಗಳು ಮನೆಯೊಳಗೆ ನುಗ್ಗಿದ್ದಾರೆ. ಬಳಿಕ ಮನೆಯಲ್ಲಿರುವ ನಗನಗದು ಕೊಡುವಂತೆ ಬೆದರಿಸಿದ್ದಾರೆ. ಬೆದರಿಕೆಗೆ ಬಗ್ಗದಾಗ ನಾಲ್ವರು ಕೈಯಲ್ಲಿ ಚೂರಿ ತೋರಿಸಿ ಕೊಲ್ಲುವ ಬೆದರಿಕೆಒಡ್ಡಿದಾಗ ಗೊದ್ರೇಜ್ ನ ಬೀಗದ ಕೀ ನೀಡಿದ್ದಾರೆ.
ಬಂಗಾರವನ್ನು ದೋಚುವ ವೇಳೆ ಅಡ್ಡ ಬಂದ ಮಗಳು ಮರೀನಾ ಪಿಂಟೋ ಅವರ ಕೈಗೆ ಗಾಯವಾಗಿದೆ ಎಂದು ಇವರ ಅಣ್ಣ ವರದಿಗಾರ ಆಸ್ಟಿನ್ ಪಿಂಟೋ ಮಾಧ್ಯಮ ದವರಿಗೆ ಮಾಹಿತಿ ನೀಡಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಇಲ್ಲಿನ ಅಂಗಡಿಯೊಂದರಲ್ಲಿ ಜ್ಯೂಸ್ ಮೆಷಿನ್ ಒಂದನ್ನು ಕಳವು ಮಾಡಲಾಗಿತ್ತು.
ಇಂದು ಸ್ಥಳಕ್ಕೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಹರೀಶ್ ಬೇಟಿ ನೀಡಿದ್ದಾರೆ. ಹಾಗೂ ಶ್ವಾನ ದಳ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.