Recent Posts

Monday, January 20, 2025
ಸುದ್ದಿ

ಮಲ್ಲ ಕ್ಷೇತ್ರದ ಆಡಳಿತ ಮೊಕ್ತೇಸರ ಆನೆಮಜಲು ವಿಷ್ಣುಭಟ್ ನಿಧನ – ಕಹಳೆ ನ್ಯೂಸ್

ಪುತ್ತೂರು : ಕಾಸರಗೋಡು ಜಿಲ್ಲೆಯ ಪ್ರಸಿದ್ದ ದೇವಿ ಕ್ಷೇತ್ರಗಳಲ್ಲಿ ಒಂದಾದ ಮಲ್ಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿದ್ದ ಧಾರ್ಮಿಕ ಮುಖಂಡ ಆನೆಮಜಲು ವಿಷ್ಣು ಭಟ್ (65) ಸ್ವಗೃಹದಲ್ಲಿ ವಿಧಿವಶರಾದರು. ಅವರು ಅಲ್ಪಕಾಲದ ಅಸೌಖ್ಯದಿಂದಿದ್ದರು.

ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ವಲಯಗಳ ಮುಂದಾಳು ಆಗಿದ್ದ ಅವರು ಜನಾನುರಾಗಿಯಾಗಿದ್ದರು. ಮಲ್ಲ ಶ್ರೀ ದುರ್ಗಾಪರಮೇಶ್ವರಿ ದೇವಾಲಯದ ಅಭಿವೃದ್ಧಿಗೆ ಅಹರ್ನಿಶಿ ಸೇವೆ ಸಲ್ಲಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮಲ್ಲ ಶ್ರೀ ದುರ್ಗಾಪರಮೇಶ್ವರಿ ಶಾಲೆಯ ಮೆನೇಜರ್, ಪೆರ್ಲ ನಲಂದ ವಿದ್ಯಾಲಯದ ಪ್ರಮುಖರಾಗಿದ್ದರು. ಅಲ್ಲದೆ ಮಲ್ಲ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮೇಳವನ್ನು ಯಶಸ್ವಿಯಾಗಿ ಮುನ್ನಡೆಸಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು