Sunday, November 24, 2024
ಸುದ್ದಿ

ಪಡುಬಿದ್ರಿ ಗ್ರಾಮ ಪಂಚಾಯತ್ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ – ಕಹಳೆ ನ್ಯೂಸ್

ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯೊಂದಿಗೆ ಭಾರತದಾದ್ಯಂತ ನ.15 ರಿಂದ ಜ. 26ರವರೆಗೆ ನಡೆಯುತ್ತಿರುವ “ವಿಕಸಿತ ಭಾರತ ಸಂಕಲ್ಪ ಯಾತ್ರೆ”ಗೆ ಪಡುಬಿದ್ರಿ ಗ್ರಾಮ ಪಂಚಾಯತ್ ನಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ಕೇಂದ್ರ ಸರ್ಕಾರದ 70ಕ್ಕೂ ಹೆಚ್ಚು ಯೋಜನೆಗಳ ಪೈಕಿ 17 ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿಯನ್ನು ಒದಗಿಸುವುದು, ಈ ಯೋಜನೆಗಳನ್ನು ಕೊನೆಯ ಮೈಲಿಯವರೆಗೂ ಮುಟ್ಟಿಸುವುದು, ಈವರೆಗೆ ಪ್ರಯೋಜನ ಪಡೆಯದ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆಗಳನ್ನು ತಲುಪಿಸುವುದು ಈ ಯಾತ್ರೆಯ ಉದ್ದೇಶವಾಗಿದ್ದು, ಯಾತ್ರೆಯಲ್ಲಿ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ವಾಹನ ಉಡುಪಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದ್ದು, ಎಲ್ ಇಡಿ ಪರದೆಯ ಮೂಲಕ ಯೋಜನೆಗಳ ಮಾಹಿತಿಯನ್ನು ನೀಡಲಾಗುವುದು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಉಪಾಧ್ಯಕ್ಷರಾದ ಹೇಮಚಂದ್ರ, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ, ವಿಕಸಿತ ಭಾರತ ಸಂಕಲ್ಪ ಯಾತ್ರೆ ನೊಡಲ್ ಅಧಿಕಾರಿಗಳಾದ ಅಜಿತ್, ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ಕರುಣಾಕರ್, ಉಡುಪಿ ಅಂಚೆ ಇಲಾಖೆಯ ಕೃಷ್ಣರಾಜ ಭಟ್, ಪಡುಬಿದ್ರಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಮಂಜುನಾಥ್, ಗ್ರಾಮ ಆಡಳಿತಾಧಿಕಾರಿಗಳಾದ ಮಥಾಯಿಸ್ ಹಾಗೂ ಪಡುಬಿದ್ರಿ ಗ್ರಾಮ ಪಂಚಾಯತ್ ಸರ್ವ ಸದಸ್ಯರು ಉಪಸ್ಥಿತರಿದ್ದರು.