Recent Posts

Tuesday, January 21, 2025
ಉಡುಪಿದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಪಯಾ೯ಯ ಪೀಠಾರೋಹಣ ಗೈಯ್ಯಲಿರುವ ಪುತ್ತಿಗೆ ಶ್ರೀ ಪಾದರು – ಕಹಳೆ ನ್ಯೂಸ್

ಬೆಳ್ತಂಗಡಿ: ಉಡುಪಿ ಶ್ರೀ ಕೃಷ್ಣ ಪೂಜಾ ಪಯಾ೯ಯ ಪೀಠಾರೋಹಣ ಗೈಯ್ಯಲಿರುವ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳು ಜ.11ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಸ್ವಾಮೀಜಿಗಳನ್ನು ಧಮ೯ಸ್ಥಳ ಮಹಾದ್ವಾರದ ಬಳಿ ಕ್ಷೇತ್ರದ ಪರವಾಗಿ ಡಿ.ಹಷೇಂದ್ರ ಕುಮಾರ್ ಸ್ವಾಗತಿಸಿದರು. ಬಳಿಕ ಶ್ರೀಗಳು ಮಂಜುನಾಥ ಸ್ವಾಮಿ ದರ್ಶನ ಪಡೆದು ಪೂಜೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು. ಬಳಿಕ ಸ್ವಾಮೀಜಿಯವರು ಧಮಾ೯ಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಕ್ಷೇತ್ರದ ಪರವಾಗಿ ಯತಿವರ್ಯರಿಂದ ಶ್ರೀಗಳ ಪಾದಪೂಜೆ ನೆರವೇರಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಡಾ. ಹೆಗ್ಗಡೆ ಅವರು ಸ್ವಾಮೀಜಿಯವರನ್ನು ಗೌರವಿಸಿದರು. ಸ್ವಾಮೀಜಿಗಳು ಡಾ.ಹೆಗ್ಗಡೆ ಸಹಿತ ಕುಟುಂಬದವರನ್ನು ಪರ್ಯಾಯಕ್ಕೆ ಆಮಂತ್ರಣ ನೀಡಿ ಆಹ್ವಾನಿಸಿ ಗೌರವಿಸಿದರು.

ಶ್ರೀಗಳೊಂದಿಗೆ ಅವರ ಕಿರಿಯ ಸ್ವಾಮೀಜಿ ಶ್ರೀ ಸುಶ್ರೀಂದ್ರ ತೀರ್ಥ ಸ್ವಾಮೀಜಿ ಇದ್ದರು. ಈ ಸಂದರ್ಭದಲ್ಲಿ ಹೇಮಾವತಿ ವೀ.ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಕ್ಷೇತ್ರದ ಪ್ರಮುಖರು ಉಪಸ್ಥಿತರಿದ್ದರು.