Monday, January 20, 2025
ಸುದ್ದಿ

ಸಿ.ಎ ಗ್ರೂಪ್ 2 ಪರೀಕ್ಷೆ ತೇರ್ಗಡೆಯಾದ ಅಂಬಿಕಾ ಮಹಾವಿದ್ಯಾಲಯದ ತೇಜಸ್ವಿನಿ – ಕಹಳೆ ನ್ಯೂಸ್

ಪುತ್ತೂರು : ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದ ಅಂತಿಮ ಬಿ.ಕಾಂ ವಿದ್ಯಾರ್ಥಿನಿ ತೇಜಸ್ವಿನಿ ಅವರು ಭಾರತೀಯ ಲೆಕ್ಕ ಪರಿಶೋಧನಾ ಮಂಡಳಿಯು (ಐಸಿಎಐ) ನವೆಂಬರ್ 2023ರಲ್ಲಿ ನಡೆಸಿದ ಸಿ.ಎ. ಇಂಟರ್ ಗ್ರೂಪ್ ಪರೀಕ್ಷೆಯ ಗ್ರೂಪ್ – 2 ವಿಭಾಗದ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಅಂತಿಮ ಹಂತಕ್ಕೆ ಆಯ್ಕೆಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು


ತೇಜಸ್ವಿನಿ ಅವರು ಬಂಟ್ವಾಳದ ನಾರಾಯಣ ಮೂಲ್ಯ ಹಾಗೂ ಹೇಮಾವತಿ ದಂಪತಿ ಪುತ್ರಿ, ಕಳೆದ ಕೆಲವು ವರ್ಷಗಳಿಂದ ಅಂಬಿಕಾ ಪದವಿಪೂರ್ವ ಹಾಗೂ ಪದವಿ ಮಹಾವಿದ್ಯಾಲಯಗಳಲ್ಲಿ ಸಿಎ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತಿದ್ದು, ಸಿ.ಎ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಮಾರ್ಗದರ್ಶನ ದೊರೆಯುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು