ಉಡುಪಿ : ಉಡುಪಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಎಚ್. ಅವರು ವರ್ಗಾವಣೆಗೊಂಡಿದ್ದು ಐಎಎಸ್ ಅಧಿಕಾರಿ ಪ್ರತೀಕ್ ಬಾಯಲ್ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
2022ರ ಮೇ ಮೊದಲ ವಾರದಲ್ಲಿ ಡಾ.ನವೀನ್ ಭಟ್ ಅವರ ಸ್ಥಾನದಲ್ಲಿ ಉಡುಪಿ ಸಿಇಓ ಆಗಿ ಅಧಿಕಾರ ವಹಿಸಿಕೊಂಡಿದ್ದ ಪ್ರಸನ್ನ ಎಚ್. 20 ತಿಂಗಳ ಬಳಿ ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನಿಯುಕ್ತಿಗೊಂಡು ಬೆಂಗಳೂರಿಗೆ ವರ್ಗಾವಣೆಗೊಂಡಿದ್ದಾರೆ. ಪ್ರಸನ್ನ ಅವರ ಸ್ಥಾನಕ್ಕೆ ನೇಮಕಗೊಂಡಿರುವ ಪ್ರತೀಕ್ ಬಾಯಲ್ ಅವರು ಈಗ ಬೆಂಗಳೂರು ಬಿಬಿಎಂಪಿಯಲ್ಲಿ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯನಿರ್ವಹಿಸುತಿದ್ದಾರೆ. 2019ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಪ್ರತೀಕ್ ಉತ್ತರ ಭಾರತದವರಾಗಿದ್ದು, ಹೊಸದಿಲ್ಲಿ ಐಐಟಿಯಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿದ್ದಾರೆ. ಅವರು ತಮ್ಮ ಎರಡನೇ ಪ್ರಯತ್ನದಲ್ಲಿ ಐಎಎಸ್‌ಗೆ ಆಯ್ಕೆಯಾಗಿದ್ದರು.