Sunday, January 19, 2025
ರಾಷ್ಟ್ರೀಯಸಿನಿಮಾಸುದ್ದಿ

ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ, ಟಾಲಿವುಡ್​ ನಟ ರಾಮ್ ಚರಣ್ ದಂಪತಿಗೆ ಆಹ್ವಾನ – ಕಹಳೆ ನ್ಯೂಸ್

ಸದ್ಯ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಗೇಮ್ ಚೇಂಜರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ರಾಮಚರಣ್ ನಾಯಕನಾಗಿ ಇದು 15ನೇ ಚಿತ್ರವಾಗಿದೆ. ಶಂಕರ್ ನಿರ್ದೇಶನದ ಈ ಪೊಲಿಟಿಕಲ್ ಆಕ್ಷನ್ ಥ್ರಿಲ್ಲರ್ ಚಿತ್ರವನ್ನು ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ದಿಲ್ ರಾಜು ನಿರ್ಮಿಸುತ್ತಿದ್ದಾರೆ.

  ರಾಮ್ ಚರಣ್ ಗೆ ನಾಯಕಿಯಾಗಿ ಕಿಯಾರಾ ಅಡ್ವಾಣಿ ನಟಿಸುತ್ತಿದ್ದಾರೆ. ಎಸ್ ಜೆ ಸೂರ್ಯ, ಸುನೀಲ್ ಮತ್ತು ಶ್ರೀಕಾಂತ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ತಮನ್ ಸಂಗೀತ ನೀಡಿದ್ದಾರೆ. ಸದ್ಯ ಚಿತ್ರೀಕರಣ ಹಂತದಲ್ಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು


RRR ನಂತಹ ಸೂಪರ್ ಹಿಟ್ ಸಿನಿಮಾ ನೀಡಿದ ರಾಮಚರಣ್ ಅವರಿಗೆ ಅಪರೂಪದ ಗೌರವ ಸಿಕ್ಕಿದೆ. ಪ್ರತಿಯೊಬ್ಬ ಹಿಂದುವೂ ಕಾಯುತ್ತಿರುವ ಅಯೋಧ್ಯೆ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ರಾಮ್ ಚರಣ್ ದಂಪತಿಗೆ ಆಹ್ವಾನ ನೀಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಶ್ರೀರಾಮನ ಪ್ರತಿಮೆಯ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಚಿತ್ರರಂಗ, ರಾಜಕೀಯ, ಕ್ರೀಡಾ ಕ್ಷೇತ್ರದ ಹಲವು ಮಂದಿ ಭಾಗವಹಿಸಲಿದ್ದಾರೆ. ಇಲ್ಲಿಯವರೆಗೆ ಚಿರಂಜೀವಿ, ಪ್ರಭಾಸ್, ಅಮಿತಾಬ್ ಬಚ್ಚನ್, ರಣಬೀರ್ ಕಪೂರ್ ದಂಪತಿ, ರಾಜ್ ಕುಮಾರ್ ಹಿರಾನಿ, ರೋಹಿತ್ ಶೆಟ್ಟಿ ಮತ್ತು ಧನುಷ್ ಅವರನ್ನು ಆಹ್ವಾನಿಸಲಾಗಿದೆ.


ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. 11 ದಿನಗಳ ಕಾಲ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.


ಈ ಕಾರ್ಯಕ್ರಮಕ್ಕೆ ಸಾವಿರಾರು ಸೆಲೆಬ್ರಿಟಿಗಳು ಹಾಜರಾಗಲಿದ್ದಾರೆ. ಬಹಳ ಅದ್ಧೂರಿಯಾಗಿ ಕಾರ್ಯಕ್ರಮ ನಡೆಸಲು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಮುಂದಾಗಿದೆ. ವಿವಿಧ ಕ್ಷೇತ್ರಗಳ ಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.


ದಕ್ಷಿಣದ ಕೆಲವೇ ಕೆಲವು ನಟರಿಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ ಸಿಕ್ಕಿದೆ. ಸ್ಯಾಂಡಲ್​ವುಡ್​ ನಟ ನಿಖಿಲ್ ಕುಮಾರ್ ಅವರಿಗೂ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ಸಿಕ್ಕಿದ್ದು, ಫೋಟೋಗಳು ವೈರಲ್‌ ಆಗಿವೆ.