Recent Posts

Sunday, January 19, 2025
ಬೆಂಗಳೂರುಸುದ್ದಿ

ಇಂದು ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಶಿವಲಿಂಗವನ್ನು ಸ್ಪರ್ಶಿಸಲಿದೆ ‘ಸೂರ್ಯರಶ್ಮಿ’ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯಾದ್ಯಂತ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ. ಎಲ್ಲಾ ಕಡೆ ಇಂದು ಬಹಳ ಸಂಭ್ರಮದಿಂದ ಹಬ್ಬವನ್ನು ಆಚರಿಸುತ್ತಾರೆ. ರಾಜ್ಯದ ಹಲವು ದೇವಾಲಯಗಳಲ್ಲಿ ಇಂದು ವಿಶೇಷ ಪೂಜೆ ನಡೆಯಲಿದೆ.

ಬೆಂಗಳೂರಿನ ಬಸವನಗುಡಿಯಲ್ಲಿರುವ ಶ್ರೀ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಶಿವನಿಗೆ ಇಂದು ವಿಶೇಷ ಅಭಿಷೇಕ  ಮಾಡಲಾಗುತ್ತದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಇಂದು ಸಂಜೆ 5:20 ರಿಂದ 5:23 ರವರೆಗೆ ಸೂರ್ಯದೇವ ಶಿವಲಿಂಗವನ್ನು ಸ್ಪರ್ಶಿಸಲಿದ್ದಾನೆ. ಈ ಐತಿಹಾಸಿಕ ದೃಶ್ಯವನ್ನು ಸಾವಿರಾರು ಜನರು ಕಣ್ತುಂಬಿಕೊಳ್ಳಲು ದೇವಾಲಯಕ್ಕೆ ಆಗಮಿಸುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಸೂರ್ಯರಶ್ಮಿಯಿಂದ ಪುಳಕಿತನಾದ ಶಿವನನ್ನು ಕಣ್ತುಂಬಿಕೊಳ್ಳಲು ಭಕ್ತರಿಗೆ ಸಕಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ಇಂದು ಶ್ರೀ ಗವಿಗಂಗಾಧರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಲಾಗುವುದು. ಬೆಳಗ್ಗೆಯಿಂದಲೇ ಭಕ್ತರು ದರ್ಶನಕ್ಕೆ ಬರಲಿದ್ದು, ದೇವಾಲಯದಲ್ಲಿ ಸಕಲ ವ್ಯವಸ್ಥೆ ಮಾಡಲಾಗಿದೆ.