Monday, January 20, 2025
ಬಂಟ್ವಾಳಸುದ್ದಿ

ನರಿಕೊಂಬು ಶ್ರೀವೀರಮಾರುತಿ ವ್ಯಾಯಮ ಶಾಲೆ ಟ್ರಸ್ಟ್ (ರಿ.)ನ ನೂತನ ವ್ಯಾಯಮಶಾಲೆ ಹಾಗೂ ಸಭಾಭವನ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಶ್ರಮಿಸಿದವರಿಗೆ ಅಭಿನಂದನಾ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ನರಿಕೊಂಬು ಗ್ರಾಮದ ಶ್ರೀ ವೀರಮಾರುತಿ ವ್ಯಾಯಮ ಶಾಲೆ ಟ್ರಸ್ಟ್ (ರಿ.) ವತಿಯಿಂದ ನೂತನವಾಗಿ ನಿರ್ಮಿಸಿದ ವ್ಯಾಯಮಶಾಲೆ ಹಾಗೂ ಸಭಾಭವನ ಲೋಕಾರ್ಪಣೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದ ಹಿನ್ನೆಲೆ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ಸಮಿತಿ ಸದಸ್ಯರಗಳಿಗೆ, ಸಂಘ ಸಂಸ್ಥೆಗಳಿಗೆ, ಗ್ರಾಮಸ್ಥರಿಗೆ ಅಭಿನಂದನಾ ಕಾರ್ಯಕ್ರಮ ನೂತನವಾಗಿ ಲೋಕಾರ್ಪಣೆಗೊಂಡ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ವೀರಮಾರುತಿ ವ್ಯಾಯಾಮಶಾಲೆ ಟ್ರಸ್ಟ್ ನ ಅಧ್ಯಕ್ಷ ಚಂದ್ರಹಾಸ ಕೋಡಿಮಜಲು ಸಹಕರಿಸಿದ ಎಲ್ಲರನ್ನು ಅಭಿನಂದಿಸುತ್ತ ಊರಿನ ಎಲ್ಲರೂ ತಮ್ಮ ತಮ್ಮ ಮನೆಯ ಕಾರ್ಯಕ್ರಮ ಎನ್ನುವ ರೀತಿಯಲ್ಲಿ ಪಾಲ್ಕೊಂಡರಿಂದ ಕಾರ್ಯಕ್ರಮವು ಯಶಸ್ವಿಯಾಗಿ ಜರಗಿತ್ತು ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮುಂದೆಯೂ ನಡೆಯುವ ಎಲ್ಲಾ ಕಾರ್ಯಕ್ರಮಗಳಿಗೂ ಸಂಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿ, ಈ ಸಮುದಾಯ ಭವನದಲ್ಲಿ ಪ್ರಥಮ ಕಾರ್ಯಕ್ರಮವಾಗಿ ಜ.22ರಂದು ಅಯೋಧ್ಯ ಶ್ರೀ ರಾಮನ ಮೂರ್ತಿ ಪ್ರತಿμÁ್ಠ ಕಾರ್ಯಕ್ರಮದ ಅಂಗವಾಗಿ ನಡೆಯುವ ಕಾರ್ಯಕ್ರಮದಲ್ಲಿ ಎಲ್ಲರೂ ಆಗಮಿಸಿ ಸಹಕರಿಸಬೇಕು ಎಂದು ಮನವಿ ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕಿ ಮಮತಾ ಸಂತೋμï ಮಾತನಾಡಿ ಕಾರ್ಯಕ್ರಮದ ಯಶಸ್ವಿಗೆ ಯಾವುದೇ ವಿಶೇಷ ಸಮಿತಿಗಳನ್ನು ಮಾಡದೆ ಎಲ್ಲರೂ ಒಟ್ಟು ಸೇರಿಕೊಂಡು ಯಾವುದೇ ರೀತಿಯ ಕುಂದು ಕೊರತೆಗಳು ಬಾರದ ರೀತಿಯಲ್ಲಿ ಅಚ್ಚುಕಟ್ಟಾಗಿ ಕಾರ್ಯಕ್ರಮ ಮಾಡಿರುವುದು ಈ ಸಮಿತಿಯ ಅಧ್ಯಕ್ಷರು ಸಮಿತಿಯ ಸದಸ್ಯರುಗಳನ್ನು, ಊರಿನ ಸಂಘ-ಸಂಸ್ಥೆ, ಗ್ರಾಮಸ್ಥರನ್ನು ತೊಡಗಿಸಿಕೊಂಡು ಯಶಸ್ವಿಯಾಗಿ ಹೇಗೆ ಕಾರ್ಯಕ್ರಮ ಮಾಡಬಹುದು ಎಂಬುದನ್ನು ಮಾದರಿಯಾಗಿ ತೋರಿಸಿದ್ದಾರೆ, ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಮುಂದೆಯೂ ವ್ಯಾಯಾಮ ಶಾಲೆಯಿಂದ ನಡೆಯುವ ಎಲ್ಲಾ ಕಾರ್ಯಕ್ರಮಗಳಿಗೂ ಸಂಪೂರ್ಣ ಸಹಕರಿಸಲಿದೆ ಎಂದರು.

ಸಭೆಯಲ್ಲಿ ಸೇರಿದ ಗ್ರಾಮಸ್ಥರು ಕಾರ್ಯಕ್ರಮದ ಯಶಸ್ವಿನ ಬಗ್ಗೆ ತಮ್ಮ ತಮ್ಮ ಅಭಿಪ್ರಾಯ ಹಂಚಿಕೊಂಡರು. ವೇದಿಕೆಯಲ್ಲಿ ಶ್ರೀ ವೀರ ಮಾರುತಿ ಮಹಿಳಾ ಮಂಡಳಿ ಅಧ್ಯಕ್ಷ ಅನಿತಾ ಜೆ, ಸಮಿತಿಯ ಸದಸ್ಯ ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯ ಪ್ರಕಾಶ್ ಕೋಡಿಮಜಲು , ಸಮಿತಿಯ ಹಿರಿಯ ಸದಸ್ಯ ಕೃಷ್ಣಪ್ಪ ಡ್ರೈವರ್, ಒಕ್ಕೂಟ ಸೇವಾ ಪ್ರತಿನಿಧಿ ಕುಸುಮಾವತಿ, ಮಾಧ್ಯಮ ವರದಿಗಾರ ಚಿನ್ನಾ ಕಲ್ಲಡ್ಕ, ಮೊದಲಾದವರು ಉಪಸ್ಥಿತರಿದ್ದರು. ಕಟ್ಟಡ ನಿರ್ಮಾಣ ಸಮಿತಿಯ ಬಾಲಕೃಷ್ಣ ಮಾಣಿಮಜಲು ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ನಂತರ ಎಲ್ಲರಿಗೂ ಸಹಭೋಜನದ ವ್ಯವಸ್ಥೆ ಮಾಡಲಾಯಿತು.