Monday, January 20, 2025
ಸುದ್ದಿ

ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನಾ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಕಾರ್ಯಕ್ರಮ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ, ಉಡುಪಿ, ಗ್ರಾಮ ಪಂಚಾಯತ್ ಮಜೂರು, ಐಟಿಡಿಪಿ ಉಡುಪಿ ಪ್ರಾಥಮಿಕ ಆರೋಗ್ಯ ಕೇಂದ್ರ ಕಾಪು ಇವರ ಸಂಯುಕ್ತ ಆಶ್ರಯದಲ್ಲಿ ಇಂದು  ಪಾದೂರು ಕೊರಗರ ಕಾಲೋನಿಯಲ್ಲಿ ಹಮ್ಮಿಕೊಳ್ಳಲಾದ ” ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನಾ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ (PM-JANMAN)” ಕಾರ್ಯಕ್ರಮವನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಶಾಸಕರು ಕೊರಗ ಜನಾಂಗದವರಿಗೆ ಸಾಂಕೇತಿಕವಾಗಿ ಅಯುಷ್ಮಾನ್ ಭಾರತ್ ಮುಖ್ಯಮಂತ್ರಿ ಕರ್ನಾಟಕ ಜನಾರೋಗ್ಯ ಯೋಜನಾ ಕಾರ್ಡನ್ನು ವಿತರಿಸಿ ಆರೋಗ್ಯ ತಪಾಸಣಾ ವಾಹನಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ, ಉಪಾಧ್ಯಕ್ಷರಾದ ಮಂಜುಳಾ ಆಚಾರ್ಯ, ಸದಸ್ಯರಾದ ವನಿತಾ, ಜಿಲ್ಲಾ ಆರೋಗ್ಯಾಧಿಕಾರಿಗಳಾದ ಐ.ಪಿ ಗಡಾಧರ್, ತಾಲ್ಲೂಕು ಆರೋಗ್ಯಾಧಿಕಾರಿಗಳಾದ ವಾಸುದೇವ್ ಉಪಾಧ್ಯಾಯ, ಕಾಪು ತಹಶೀಲ್ದಾರರಾದ ಪ್ರತಿಭಾ, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ, ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ರೋಷನಿ ಪೂಂಜ ಹಾಗೂ ಪ್ರಮುಖರು ಉಪಸ್ಥಿತರಿದ್ದರು.