Sunday, November 24, 2024
ಸುದ್ದಿ

ಕುರ್ಕಾಲು ಗ್ರಾಮ ಪಂಚಾಯತ್ ವಿಕಸಿತ ಭಾರತ ಸಂಕಲ್ಪ ಯಾತ್ರೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ – ಕಹಳೆ ನ್ಯೂಸ್

ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯೊಂದಿಗೆ ಭಾರತದಾದ್ಯಂತ ನವೆಂಬರ್ 15 ರಿಂದ ಜನವರಿ 26ರವರೆಗೆ ನಡೆಯುತ್ತಿರುವ “ವಿಕಸಿತ ಭಾರತ ಸಂಕಲ್ಪ ಯಾತ್ರೆ”ಗೆ ಇಂದು  ಕುರ್ಕಾಲು ಗ್ರಾಮ ಪಂಚಾಯತ್ ಬಳಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕೇಂದ್ರ ಸರ್ಕಾರದ 70ಕ್ಕೂ ಹೆಚ್ಚು ಯೋಜನೆಗಳ ಪೈಕಿ 17 ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿಯನ್ನು ಒದಗಿಸುವುದು, ಈ ಯೋಜನೆಗಳನ್ನು ಕೊನೆಯ ಮೈಲಿಯವರೆಗೂ ಮುಟ್ಟಿಸುವುದು, ಈವರೆಗೆ ಪ್ರಯೋಜನ ಪಡೆಯದ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆಗಳನ್ನು ತಲುಪಿಸುವುದು ಈ ಯಾತ್ರೆಯ ಉದ್ದೇಶವಾಗಿದ್ದು, ಯಾತ್ರೆಯಲ್ಲಿ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ವಾಹನ ಉಡುಪಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದ್ದು, ಎಲ್ಇಡಿ ಪರದೆಯ ಮೂಲಕ ಯೋಜನೆಗಳ ಮಾಹಿತಿಯನ್ನು ನೀಡಲಾಗುವುದು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿ, ಕುರ್ಕಾಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಶಾಂತ್ ಆನಂದ ಪೂಜಾರಿ, ವಿಕಸಿತ ಭಾರತ ಸಂಕಲ್ಪ ಯಾತ್ರೆ ನೊಡಲ್ ಅಧಿಕಾರಿಗಳಾದ ಪವನ್, ಕೆನರಾ ಬ್ಯಾಂಕ್ ನ ಎಫ್.ಎಲ್.ಸಿ ಪ್ರದೀಪ್, ಅಂಚೆ ಇಲಾಖೆಯ ಸಂತೋಷ್, ಕೃಷಿ ಇಲಾಖೆಯ ವೆಂಕಟೇಶ್, ರುಡ್ ಸೆಟ್ ಸಂಸ್ಥೆಯ ಶಾಂತಪ್ಪ, ಕುರ್ಕಾಲು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಯೋಗಿತಾ, ಗ್ರಾಮ ಆಡಳಿತಾಧಿಕಾರಿಗಳಾದ ಲೆಸ್ಟರ್ನ್ ಕರ್ನೆಲಿಯೋ ಹಾಗೂ ಕುರ್ಕಾಲು ಗ್ರಾಮ ಪಂಚಾಯತ್ ಸರ್ವ ಸದಸ್ಯರು ಉಪಸ್ಥಿತರಿದ್ದರು.